ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಪೊರೇಟ್ ಕಂಪೆನಿಗಳಿಗೆ ರೈತರ ಭೂಮಿ

Last Updated 21 ಆಗಸ್ಟ್ 2017, 8:44 IST
ಅಕ್ಷರ ಗಾತ್ರ

ಉಳ್ಳಾಲ: ಭಾರತ ಬಹು ಸಂಸ್ಕೃತಿಯನ್ನು ಹೊಂದಿರುವ ಕೃಷಿ ಪರಂಪರೆಯ ದೇಶ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಭೂಮಿಯನ್ನು ಕಾರ್ಪೊ ರೇಟ್‌ ಕಂಪೆನಿಗಳಿಗೆ ಮಾರುವ ಮೂಲಕ ದೇಶದಲ್ಲಿ ಋಷಿ ಪರಂಪರೆಯನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಜನಪರ ಚಿಂತಕಿ ಕೆ.ನೀಲಾ ಅಭಿಪ್ರಾಯಪಟ್ಟರು.

ಕುತ್ತಾರಿನ ಮುನ್ನೂರು ಯುವಕ ಮಂಡಲದ ಸಭಾಂಗಣದಲ್ಲಿ ಭಾನು ವಾರ ನಡೆದ ಡಿವೈಎಫ್‌ಐ 13ನೇ ಉಳ್ಳಾಲ ವಲಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿ, ‘ಭಾರತದ ಆನಾದಿ ಕಾಲದಿಂದಲೂ ಕೃಷಿ ಆಧಾರಿತ ದೇಶವಾಗಿದ್ದು, ಜಗದ ಜೀವರಾಶಿಗೆ ಅನ್ನ ನೀಡುವ ಕೃಷಿ ಸಂಸ್ಕೃತಿಯನ್ನು ಮೋದಿ ನೇತೃತ್ವದಲ್ಲಿ ಅದಾನಿ ಅಂಬಾನಿಗಳು ಕೂತು ತಿನ್ನವ ಋಷಿ ಪರಂಪರೆಯೆಡೆಗೆ ಕೊಂಡೊ ಯ್ಯುತ್ತಿದ್ದಾರೆ’ಎಂದು ಆರೋಪಿಸಿದರು.

ದೇಶದ ಕೃಷಿ ಭೂಮಿಗಳು ಕಾರ್ಪೊರೇಟ್‌ ಸಂಸ್ಥೆಗಳಿಗೆ ಪರಭಾರೆ ಯಾಗುತ್ತಿದ್ದು, ಇದರಿಂದ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಯುವಕರು ಹಣಕ್ಕಾಗಿ ತಪ್ಪು ದಾರಿ ತುಳಿಯುತ್ತಿದ್ದಾರೆ. ಕೇಂದ್ರ ಸರ್ಕಾರದ ಸಮೀಕ್ಷೆಯಂತೆ ದೇಶದಲ್ಲಿ ಶೇ. 71ರಷ್ಟು ಜನರ ದೈನಂದಿನ ಆದಾಯ ₹20ಕ್ಕಿಂತ ಕಡಿಮೆಯಾಗಿದೆ. ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ  ಎಂದು ಯುವಕರ ಮತವನ್ನು ಸೆಳೆದಿದ್ದ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಡಳಿತಕ್ಕೆ ಬಂದ ಮೂರು ವರ್ಷದಲ್ಲಿ ಸುಮಾರು 70 ಲಕ್ಷದಷ್ಟು ಜನರು ಕೆಲಸ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಆಳ್ವಿಕೆ ಮಾಡುತ್ತಿರುವುದು ಕಟುಕ ಸರ್ಕಾರಗಳು. ಇಂದು ಆಡಳಿತ ನಡೆ ಸುತ್ತಿರುವವರು ದೇಶಭಕ್ತಿಯ ಬಗ್ಗೆ ಪಾಠ ಮಾಡುವ ಮೂಲಕ ಬಹು ಸಂಸ್ಕೃತಿಯ ದೇಶವನ್ನು ಒಡೆಯುವ ಮೂಲಕ ದೇಶ ಭಕ್ತಿಯ ಹುಸಿ ನಾಟಕವಾಡುತ್ತಿದ್ದಾರೆ. ಆದರೆ ಇವರ ಪಕ್ಷದ ಹಿರಿಯರು ಒಬ್ಬರೇ ಒಬ್ಬರು ಸ್ವಾತಂತ್ರ ಚಳವಳಿಯಲ್ಲಿ ಬಲಿ ದಾನ ಮಾಡಿಲ್ಲ. ದೇಶದಲ್ಲಿ ಇಂದು ನಡೆಯುತ್ತಿರುವ ಅಲ್ಪಸಂಖ್ಯಾತ ಕೋಮುವಾದ ಮತ್ತು ಬಹು ಸಂಖ್ಯಾತ ಕೋಮುವಾದ ದೇಶಕ್ಕೆ ಬಹು ದೊಡ್ಡ ಅಪಾಯದ ಗಂಟೆಯಾಗಿದ್ದು, ಇದನ್ನು ಮೀರಿ ಭಾರತದಲ್ಲಿ ಬಹು ಸಂಸ್ಕೃತಿಯನ್ನು ಗಟ್ಟಿಗೊಳಿಸುವ ತಾಕತ್ತು ಇಂದಿನ ಯುವ ಸಮುದಾಯದಲ್ಲಿದ್ದು ಇಂತಹವರ ವಿರುದ್ಧ ಯುವಜನತೆ ಒಟ್ಟಾಗಿ ಹೋರಾಟ ನಡೆಸಿದರೆ ಮಾತ್ರ ದೇಶ ಉಳಿಯಲು ಸಾಧ್ಯ ಎಂದು ಹೇಳಿದರು.

ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಮಹಾಬಲ ಟಿ.ದೆಪ್ಪೆಲಿಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಗಂಗಾಧರ್ ಉಳ್ಳಾಲ್, ಡಿವೈಎಫ್‍ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ದಯಾನಂದ ಶೆಟ್ಟಿ, ಕಾರ್ಯ ದರ್ಶಿ ಸಂತೋಷ್ ಕುಮಾರ್ ಬಜಾಲ್, ಕೋಶಾಧಿಕಾರಿ ರಫೀಕ್ ಹರೇಕಳ, ಎಸ್‍ಎಫ್‍ಐ ಜಿಲ್ಲಾ ಅಧ್ಯಕ್ಷ ನಿತಿನ್ ಕುತ್ತಾರ್, ಡಿವೈಎಫ್ಐ ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ವಲಯ ಸಮಿತಿ ಉಪಾಧ್ಯಕ್ಷರಾದ ರೋಹಿದಾಸ್ ಭಟ್ನಗರ, ಹರೀಶ್ ಕೆರೆಬೈಲ್ ಉಪಸ್ಥಿತರಿದ್ದರು.

ಡಿವೈಎಫ್‍ಐ ಉಳ್ಳಾಲ ವಲಯ ಸಮಿತಿ ಜತೆ ಕಾರ್ಯದರ್ಶಿ ಸುನಿಲ್ ತೇವುಲ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜೀವನ್ ರಾಜ್ ಕುತ್ತಾರ್ ಪ್ರಸ್ತಾವನೆಗೈದರು. ಜತೆ ಕಾರ್ಯದರ್ಶಿ ರಝಾಕ್ ಮೊಂಟೆಪದವು ನಿರೂಪಿಸಿ ದರು. ಅಧ್ಯಕ್ಷ ಅಶೋಕ್ ಶೆಟ್ಟಿ ಚೆಂಬುಗುಡ್ಡೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT