ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತಂತ್ರಜ್ಞಾನ ಕ್ಷೇತ್ರಕ್ಕೆ ರಾಜೀವ್ ಗಾಂಧಿ ಕೊಡುಗೆ ಅಪಾರ’

Last Updated 21 ಆಗಸ್ಟ್ 2017, 9:12 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಭಾರತದ ಪ್ರಧಾನಿ ರಾಜೀವ್‌ ಗಾಂಧಿ ಆಡಳಿತದಲ್ಲೇ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಅಡಿಗಲ್ಲು ಹಾಕಲಾಗಿತ್ತು’ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಮುನಿನರಸಿಂಹಯ್ಯ ಅಭಿಪ್ರಾಯಪಟ್ಟರು. ದೇವನಹಳ್ಳಿ ಗುರುಭವನದ ಆವರಣ ದಲ್ಲಿ ಭಾನುವಾರ ಚಿಕ್ಕ ಬಳ್ಳಾಪುರ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಯುವ ಘಟಕ ವತಿಯಿಂದ ರಾಜೀವ್‌ ಗಾಂಧಿ ಮತ್ತು ದೇವರಾಜು ಅರಸು ಜನ್ಮ ದಿನಾಚರಣೆ ಅಂಗವಾಗಿ ನಡೆದ ಉಚಿತ ಆರೋಗ್ಯ ತಪಾಸಣೆ ಮತ್ತು ಸ್ವಯಂ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಮೊಬೈಲ್‌ ಸಂಪರ್ಕ, ಲ್ಯಾಪ್‌ಟಾಪ್‌, ವಿಡಿಯೊಕಾಲ್‌ ಅನೇಕ ಆವಿಷ್ಕಾರಗಳಿಗೆ ರಾಜೀವ್‌ ಗಾಂಧಿ ಕಾರಣ’ ಎಂದರು. ಕಾಂಗ್ರೆಸ್‌ ಯುವ ಮುಖಂಡಹರ್ಷ ಮೊಯಿಲಿ ಮಾತನಾಡಿ, ‘ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟರನ್ನು ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗದವರನ್ನು ಎಂದಿಗೂ ಕೈಬಿಟ್ಟಿಲ್ಲ. ಕಾಂಗ್ರೆಸ್‌ ಸರ್ಕಾರದ ಸಾಧನೆ ಮಾಹಿತಿ ಜನಸಾಮಾನ್ಯರಿಗೆ ತಲುಪಿಲ್ಲ’ ಎಂದರು.

ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶ್‌ ಮಾತ ನಾಡಿದರು. ಚಿಕ್ಕಬಳ್ಳಾಪುರ ಲೋಕ ಸಭಾ ಕ್ಷೇತ್ರ ಯುವ ಕಾಂಗ್ರೆಸ್‌ ಅಧ್ಯಕ್ಷ ಮಾರುತಿ, ಜಿಲ್ಲಾ ಕಾಂಗ್ರೆಸ್‌ ಯುವ ಘಟಕ ಅಧ್ಯಕ್ಷ ಕೆ.ಆರ್‌.ನಾಗೇಶ್‌, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಸಿ.ಮಂಜುನಾಥ್‌, ರಾಧಮ್ಮ ಮುನಿರಾಜು, ಕಾಂಗ್ರೆಸ್‌ ಯುವ ಘಟಕ ಅಧ್ಯಕ್ಷ ಸುಮಂತ್‌, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಆರ್‌.ರವಿಕುಮಾರ್‌ ಇದ್ದರು. ಗ್ರಾ.ಪಂ. ಅಧ್ಯಕ್ಷೆ ರೇಖಾ, ಉಪಾಧ್ಯಕ್ಷೆ ಸರಸ್ವತಿ ಮಂಜುನಾಥ್‌, ಕಾಂಗ್ರೆಸ್ ಉಪಾಧ್ಯಕ್ಷ ಎಸ್‌.ಜಿ. ಮಂಜುನಾಥ್‌, ಪುರುಷೋತ್ತಮ್‌, ಡಾ. ಸುನಿಲ್‌ ಕುಮಾರ್‌, ಮುಖಂಡ ಚಂದ್ರಪ್ಪ, ಜಗನ್ನಾಥ್‌, ಚಿನ್ನಪ್ಪ, ವಿ,ನಾರಾಯಣ ಸ್ವಾಮಿ, ಕೋದಂಡ ರಾಮಯ್ಯ, ಬೀಸೇಗೌಡ, ಲಕ್ಷ್ಮಿಕಾಂತ್‌, ಕೃಷ್ಣಯ್ಯ, ಎಸ್‌.ಜಿ.ನಾರಾಯಣಸ್ವಾಮಿ, ಪ್ರಸನ್ನ ಕುಮಾರ್‌ ಇದ್ದರು. ಒಟ್ಟು 586 ಯುವಕರು ಉಚಿತ ರಕ್ತದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT