ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದುಳಿದ ವರ್ಗ ನಿರ್ಲಕ್ಷಿಸಿದ ಕಾಂಗ್ರೆಸ್

Last Updated 21 ಆಗಸ್ಟ್ 2017, 9:15 IST
ಅಕ್ಷರ ಗಾತ್ರ

ಆನೇಕಲ್‌: ‘ರಾಜಕೀಯ ಸವಲತ್ತು ಅನುಭವಿಸಿ ಸಮಾಜದ ಸಂಘಟನೆ ಮಾಡಲಿಲ್ಲ. ಯಾವುದೇ ಅಧಿಕಾರ ವಿಲ್ಲದೇ ರಾಜ್ಯದಾದ್ಯಂತ ವಿಶ್ವಕರ್ಮ ಸಮಾಜ ಸಂಘಟನೆ ಮಾಡಲಾಗಿದೆ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ವಿಶ್ವಕರ್ಮ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಕೆ.ಪಿ.ನಂಜುಂಡಿ ಅಭಿಪ್ರಾಯಪಟ್ಟರು. ಆನೇಕಲ್ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

‘ಕಾಂಗ್ರೆಸ್ ಸಮುದಾಯವನ್ನು ನಿರ್ಲಕ್ಷ್ಯ ಮಾಡಿದ ಪರಿಣಾಮವಾಗಿ ಬೇಸರಗೊಂಡು ಸಮಾಜದ ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದಾಗಿ’ ಅವರು ತಿಳಿಸಿದರು.
‘ರಾಜ್ಯದಲ್ಲಿ 45 ಲಕ್ಷಕ್ಕೂ ಹೆಚ್ಚು ಮಂದಿ ವಿಶ್ವಕರ್ಮ ಸಮಾಜದವರಿದ್ದಾರೆ. 103 ಹಿಂದುಳಿದ ವರ್ಗಗಳ ಜಾತಿಗಳಲ್ಲಿ ವಿಶ್ವಕರ್ಮ ಜನಾಂಗದವರು ಮುಂಚೂಣಿಯಲ್ಲಿ
ದ್ದಾರೆ. ಆದರೆ, ಈ ಸಮಾಜಕ್ಕೆ ಕಾಂಗ್ರೆಸ್‌ಗೆ ಗೌರವ ನೀಡಲಿಲ್ಲ.

ಹೆಸರಿಗೆ ವಿಶ್ವಕರ್ಮ ನಿಗಮ ಸ್ಥಾಪನೆ ಮಾಡಿದೆ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿಶ್ವಕರ್ಮ ಸಮಾಜ ಎಲ್ಲಾ ಧರ್ಮಗಳನ್ನು ಸಮನಾಗಿ ನೋಡುವ ಸಮಾಜವಾಗಿದೆ. ತಿರಸ್ಕಾರ ಮಾಡಿದರೆ ಒಂದು ಸಂಸ್ಕೃತಿ ತಿರಸ್ಕಾರ ಮಾಡಿದಂತೆ ಎಂದರು. ಬೇಲೂರಿನ ಚನ್ನಕೇಶವ ದೇವಾಲಯದ ಮುಂಭಾಗದಲ್ಲಿ ಜಕಣಾಚಾರಿಯ ಪ್ರತಿಮೆ ಸ್ಥಾಪನೆ ಮಾಡಬೇಕು. ವಿಶ್ವಕರ್ಮ ಜಯಂತಿಗೆ ಸಾರ್ವಜನಿಕ ರಜೆ ನೀಡಬೇಕು. ವಿಶ್ವಕರ್ಮ ನಿಗಮವನ್ನು ಕೇಂದ್ರ ಸರ್ಕಾರ ಸ್ಥಾಪನೆ ಮಾಡಿ ಅನುಕೂಲ ಮಾಡಿ ಕೊಡಬೇಕು ಎಂದರು.

ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅ.8 ರಂದು ವಿಶ್ವಕರ್ಮ ಮಹಾಸಭೆಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ 9ನೇ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತ್ಯುತ್ಸವ ಆಚರಿಸಲಾಗುವುದು ಎಂದರು.

ಮಾಜಿ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿ, ‘ವಿಶ್ವಕರ್ಮ ಜನಾಂಗದಂತಹ ಪುಟ್ಟ ಸಮಾಜವನ್ನು ಯಾರು ಗುರುತಿಸದೇ ನಿರ್ಲಕ್ಷ್ಯ ಮಾಡಿದ ಸಂದರ್ಭದಲ್ಲಿ ಸಮಾಜವನ್ನು ಸಂಘಟಿಸಿ ಗೌರವದಿಂದ ನೋಡುವಂತೆ ಮಾಡಿದ ಹೆಗ್ಗಳಿಕೆ ಕೆ.ಪಿ.ನಂಜುಂಡಿ ಅವರಿಗೆ ಸಲ್ಲುತ್ತದೆ’ ಎಂದರು.

ವಿಶ್ವಕರ್ಮ ಸಮಾಜ ಹೊಸೂರು ಮಠದ ಪುಟ್ಟಚಾರ್ಯ ಸ್ವಾಮಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ.ವಿ.ಶಿವಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಮುನಿರಾಜು, ಮುಖಂಡರಾದ ಎಂ.ಯಂಗಾರೆಡ್ಡಿ, ಕೆ.ಸಿ.ರಾಮಚಂದ್ರ, ಶಂಕರ್‌, ನಾರಾಯಣಪ್ಪ, ಶ್ರೀನಿವಾಸ್‌ ರೆಡ್ಡಿ, ಟೌನ್ ಬಿಜೆಪಿ ಅಧ್ಯಕ್ಷ ಸಿ.ಕೆ.ಜಗನ್ನಾಥ್, ಕಾರ್ಯದರ್ಶಿ ಎಂ. ರಾಮಕೃಷ್ಣ, ಆನೇಕಲ್ ತಾಲ್ಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ರಾಜಾಚಾರ್, ವಣಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸೋಮಶೇಖರ್, ವಿಶ್ವಕರ್ಮ ಮಹಾಸಭಾದ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಆರ್.ವಿ. ಭಾಗ್ಯಮ್ಮ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಟಿ. ನಾರಾಯಣ, ಪುರಸಭಾ ಸದಸ್ಯ ರಾದ ಕೆ.ನಾಗರಾಜು, ನರಸಿಂಹರೆಡ್ಡಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದಿನ್ನೂರು ರಾಜು, ರಾಧರಮಣ, ಎಸಿಪಿ ನಾಗ ರಾಜು, ಮಹದೇವ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT