ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರತ್‌ ಕೊಲೆ ಪ್ರಕರಣ ಮತ್ತೊಬ್ಬನ ಬಂಧನ?

Last Updated 21 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ಮಂಗಳೂರು: ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ಕುಮಾರ್‌ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ವಿಶೇಷ ತನಿಖಾ ತಂಡದ ಪೊಲೀಸರು ಸೋಮವಾರ ಮೈಸೂರಿನಲ್ಲಿ ಬಂಧಿಸಿದ್ದಾರೆ ಎಂದು ಗೊತ್ತಾಗಿದೆ. ಆದರೆ, ಪೊಲೀಸರು ಬಂಧನವನ್ನು ಖಚಿತಪಡಿಸಿಲ್ಲ.

ಬಂಟ್ವಾಳ ಸಮೀಪದ ಆಲಾಡಿ ನಿವಾಸಿ ಶರೀಫ್ (21) ಎಂಬಾತ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಮಂಗಳೂರು ನಗರ ಸಿಸಿಬಿ ಪೊಲೀಸರನ್ನು ಒಳಗೊಂಡ ತಂಡ ಈತನನ್ನು ಬಂಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈತ ಎಲೆಕ್ಟ್ರಿಷಿಯನ್‌ ಕೆಲಸ ಮಾಡುತ್ತಿದ್ದು, ಶರತ್ ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳಲ್ಲಿ ಒಬ್ಬ ಎಂದು ಗೊತ್ತಾಗಿದೆ. ನೇರವಾಗಿ ಕೊಲೆಯಲ್ಲಿ ಭಾಗಿಯಾದ ಇನ್ನೂ ಇಬ್ಬರ ಪೈಕಿ ಒಬ್ಬಾತ ಘಟನೆ ನಡೆದ ಕೆಲವೇ ದಿನಗಳಲ್ಲಿ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂಬ ಸುದ್ದಿ ಹಬ್ಬಿದೆ.

ಶರೀಫ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆ ಮತ್ತು ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣಗಳಿವೆ. ಈತನ ಅಣ್ಣ ಸೇರಿದಂತೆ ಕುಟುಂಬದ ಕೆಲವರು ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯ ಸಕ್ರಿಯ ಕಾರ್ಯಕರ್ತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT