ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳ: ನ.26ರಂದು ಸಂಸತ್‌ ಚುನಾವಣೆ

Last Updated 21 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳದ ಸಂಸತ್‌ ಮತ್ತು ಪ್ರಾಂತ್ಯಗಳಿಗೆ ನವೆಂಬರ್‌ 26ರಂದು ಚುನಾವಣೆ ನಡೆಯಲಿದೆ ಎಂದು ಸರ್ಕಾರ ಸೋಮವಾರ ಪ್ರಕಟಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಚುನಾವಣೆ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣಾ ಆಯೋಗದೊಂದಿಗೆ ಮಾತುಕತೆ ನಡೆಸಿದ ನಂತರ ಚುನಾವಣೆ ನಡೆಸುವ ನಿರ್ಧಾರಕ್ಕೆ ಬರಲಾಯಿತು. ಆಯೋಗವು ವಿವರವಾದ ವೇಳಾಪಟ್ಟಿ ಪ್ರಕಟಿಸಲಿದೆ ಎಂದು ವಾರ್ತಾ ಸಚಿವ ಮೋಹನ್‌ ಬಹದೂರ್‌ ಹೇಳಿದ್ದಾರೆ.

ನೇಪಾಳ ಸಂಸತ್‌ ಒಟ್ಟು 275 ಸದಸ್ಯ ಬಲವನ್ನು ಹೊಂದಿದ್ದು, 165 ಮಂದಿಯನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಉಳಿದ 110 ಮಂದಿಯನ್ನು ನಾಮನಿರ್ದೇಶನ ಮಾಡಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT