ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಯಾ ವಿರುದ್ಧದ ವಿಚಾರಣೆ ನಿಲ್ಲಿಸಲು ’ಸುಪ್ರೀಂ’ ನಕಾರ

Last Updated 21 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ಢಾಕಾ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ನಡೆಯುತ್ತಿರುವ ವಿಚಾರಣೆ ನಿಲ್ಲಿಸುವಂತೆ ಕೋರಿ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲಿದಾ ಜಿಯಾ ಅವರು ಮಾಡಿದ ಮನವಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ.

ಜಿಯಾ ಅವರು 2001ರಿಂದ 2006ರ ಅವಧಿಯಲ್ಲಿ ಪ್ರಧಾನಿಯಾಗಿದ್ದಾಗ ಢಾಕಾ ಮತ್ತು ಚಿತ್ತಗಾಂಗ್‌ನಲ್ಲಿ ಕಂಟೈನರ್‌ ನಿರ್ವಹಣಾ ಘಟಕವನ್ನು ಸ್ಥಾಪಿಸಲು ಗ್ಲೋಬಲ್‌ ಆಗ್ರೊ ಟ್ರೇಡ್‌ ಖಾಸಗಿ ಕಂಪೆನಿಗೆ ಕಾನೂನುಬಾಹಿರವಾಗಿ ಗುತ್ತಿಗೆ ನೀಡಿದ ಆರೋಪ ಎದುರಿಸುತ್ತಿದ್ದಾರೆ.

ಜಿಯಾ ಅವರು ನಿಯಮ ಉಲ್ಲಂಘಿಸಿ ಗುತ್ತಿಗೆ ನೀಡಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು ₹795 ಕೋಟಿ ನಷ್ಟವಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ಆಯೋಗ ಆರೋಪಿಸಿದೆ.

ಆಯೋಗವು 2007ರಲ್ಲಿ ಜಿಯಾ ಸೇರಿದಂತೆ 11 ಮಂದಿ ವಿರುದ್ಧ ತನಿಖೆ ವಂಚನೆ ಪ್ರಕರಣ ದಾಖಲಿಸಿಕೊಂಡಿದೆ. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಜಿಯಾ, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT