ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣೇಶ ಹಬ್ಬಕ್ಕೆ 1,000 ಹೆಚ್ಚುವರಿ ಬಸ್‌

Last Updated 21 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಆಗಸ್ಟ್ 23 ರಿಂದ 26ರವರೆಗೆ ನಗರದಿಂದ ರಾಜ್ಯದ ವಿವಿಧ ಭಾಗಗಳಿಗೆ ಹಾಗೂ ಅಂತರ ರಾಜ್ಯದ ವಿವಿಧ ಸ್ಥಳಗಳಿಗೆ 1,000 ಹೆಚ್ಚುವರಿ ಬಸ್‌ಗಳ ಸಂಚಾರ ವ್ಯವಸ್ಥೆ ಕಲ್ಪಿಸಿದೆ.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಪಾವಗಡ, ಹೊಸದುರ್ಗಕ್ಕೆ ಬಸ್‌ಗಳ ಸೌಲಭ್ಯ ಕಲ್ಪಿಸಲಾಗಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ಬಸ್‌ಗಳು ಹೊರಡಲಿವೆ.

ಶಾಂತಿನಗರ ಬಸ್‌ ನಿಲ್ದಾಣದಿಂದ ಬೇರೆ ರಾಜ್ಯಗಳಿಗೆ ಬಸ್‌ಗಳು ಸಂಚರಿಸಲಿವೆ. ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡವಾಗಿ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ 5 ಮತ್ತು ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಕಾಯ್ದಿರಿಸಿದರೆ ಬರುವ ಪ್ರಯಾಣದಲ್ಲಿ ಶೇ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮಾಹಿತಿಗೆ: www.ksrtc.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT