ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳ ಶುಲ್ಕದ ವಿವರ ಪ್ರಕಟಣೆಗೆ ಆಗ್ರಹ

Last Updated 21 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಶಿಕ್ಷಣ ಇಲಾಖೆಯ ಆದೇಶದ ಅನ್ವಯ ಎಲ್ಲ ಶಾಲೆಗಳ ಪ್ರವೇಶದ್ವಾರದ ಮುಂಭಾಗದಲ್ಲಿ ಶಾಲೆಯ ಮಾಹಿತಿ ಮತ್ತು ಶುಲ್ಕದ ವಿವರಗಳನ್ನು ಕಡ್ಡಾಯವಾಗಿ ಪ್ರಕಟಿಸಬೇಕು’ ಎಂದು ಕರ್ನಾಟಕ ವಿದ್ಯಾರ್ಥಿಗಳ ಪೋಷಕರ ಜಾಗೃತಿ ವೇದಿಕೆಯ ಅಧ್ಯಕ್ಷ ರವಿ ಒತ್ತಾಯಿಸಿದರು.

ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿನ ಖಾಸಗಿ ಶಾಲೆಗಳಲ್ಲಿ ಹೆಚ್ಚು ಡೊನೇಷನ್‌ ಸಂಗ್ರಹಿಸಲಾಗುತ್ತಿದೆ. ಎಲ್ಲ ಶಾಲೆಗಳಲ್ಲೂ ಏಕರೂಪದ ಶಿಕ್ಷಣ ಜಾರಿಗೆ ತರಬೇಕು. ಏಕಕಾಲಕ್ಕೆ ವಿದ್ಯಾರ್ಥಿಗಳ ದಾಖಲಾತಿ ಪ್ರಾರಂಭಿಸಬೇಕು. ಶಾಲಾ ಶುಲ್ಕವನ್ನು ಪದೇ ಪದೇ ಹೆಚ್ಚಳ ಮಾಡುವುದನ್ನು ನಿಲ್ಲಿಸಬೇಕು’ ಎಂದು ತಿಳಿಸಿದರು.

‘ಸಹಕಾರಿ ಸಂಘಗಳ ಮೂಲಕ ವಿದ್ಯಾರ್ಥಿಗಳ ಸಮವಸ್ತ್ರ, ಪಠ್ಯಪುಸ್ತಕ, ನೋಟ್‌ಬುಕ್‌ ಮತ್ತು ಇನ್ನಿತರ ಸಲಕರಣೆಗಳನ್ನು ಪೂರೈಸಬೇಕು. ಶಾಲೆಗಳು ಪ್ರಾರಂಭಕ್ಕೆ ಮೊದಲೇ ಸಮವಸ್ತ್ರ ಮುಕ್ತ ಮಾರುಕಟ್ಟೆಯಲ್ಲಿ ದೊರೆಯುವಂತೆ ಮಾಡಬೇಕು. ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯಬೇಕು’ ಎಂದು ಅವರು ಆಗ್ರಹಿಸಿದರು.

‘ಈ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಇದೇ 23ರಂದು ಬೆಳಿಗ್ಗೆ 9 ಗಂಟೆಗೆ ಸ್ವಾತಂತ್ರ್ಯ ಉದ್ಯಾನದಿಂದ ಮುಖ್ಯಮಂತ್ರಿಗಳ ಗೃಹಕಚೇರಿಯವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT