ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂರಶಿಕ್ಷಣ ಪರೀಕ್ಷೆಗೆ ಆಧಾರ್‌ ಕಡ್ಡಾಯ

Last Updated 22 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ದೂರಶಿಕ್ಷಣದ ಮೂಲಕ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಇನ್ನು ಮುಂದೆ ಪರೀಕ್ಷೆ ಎದುರಿಸುವ ವೇಳೆ ಆಧಾರ್‌ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ಇದರಿಂದ ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವುದನ್ನು ತಪ್ಪಿಸಬಹುದಾಗಿದೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ (ಎಚ್‌ಆರ್‌ಡಿ) ಅನುಮತಿ ಮೇರೆಗೆ, ರಾಷ್ಟ್ರೀಯ ಮುಕ್ತ ಕಲಿಕಾ ಸಂಸ್ಥೆ (ಎನ್ಐಎಎಸ್‌)  ಆಧಾರ್ ಅನ್ನು ಕಡ್ಡಾಯ ಮಾಡುವ ತೀರ್ಮಾನ ಕೈಗೊಂಡಿದೆ. ಮುಂದಿನ ವರ್ಷ ಪರೀಕ್ಷೆಗೆ ಹಾಜರಾಗುವವರಿಗೆ ಈ ಹೊಸ ನಿಯಮ ಅನ್ವಯವಾಗಲಿದೆ ಎಂದು ಎನ್‌ಐಎಎಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಮಾರ್ಚ್‌ನಲ್ಲಿ ನಡೆದ ಪರೀಕ್ಷೆಯಲ್ಲಿ ಸಾಕಷ್ಟು ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದನ್ನು ತನಿಖಾ ತಂಡ ಪತ್ತೆಹಚ್ಚಿದೆ. ಇಂತಹ ಚಟುವಟಿಕೆ ತಡೆಯಲು ಆಧಾರ್ ಕಡ್ಡಾಯ ಮಾಡಲಾಗಿದೆ’ ಎಂದು ಅವರು ವಿವರಿಸಿದ್ದಾರೆ.

‘ಪರೀಕ್ಷಾ ಕೇಂದ್ರಗಳಲ್ಲಿ ಸ್ಕ್ಯಾನರ್ ಯಂತ್ರಗಳನ್ನು ಅಳವಡಿಸಲಾಗುವುದು. ಯಾವ ವಿದ್ಯಾರ್ಥಿಯ ಹೆಬ್ಬೆರಳ ಗುರುತು ಈಗಾಗಲೇ ನೀಡಿದ ಮಾಹಿತಿ ಜತೆ ತಾಳೆಯಾಗುವುದೋ ಅವರನ್ನು ಮಾತ್ರ ಪರೀಕ್ಷಾ ಕೊಠಡಿಗೆ ಬಿಡಲಾಗುವುದು’ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT