ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ನೇ ದಿನಕ್ಕೆ ಕಾಲಿಟ್ಟ ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ

ನಾಲ್ವರು ನೌಕರರು ಅಸ್ವಸ್ಥ * ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲು
Last Updated 22 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮೀಣ ಅಂಚೆ ಸೇವಕರ ವೇತನ ಪರಿಷ್ಕರಣೆಗಾಗಿ ರಚಿಸಿದ್ದ ಸಮಿತಿ ಸಲ್ಲಿಸಿರುವ ವರದಿಯನ್ನು ಕೂಡಲೇ ಅನುಷ್ಠಾನ ಗೊಳಿಸಬೇಕು ಎಂದು ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನಾಲ್ವರು ಅಸ್ವಸ್ಥಗೊಂಡಿದ್ದಾರೆ.

ನೌಕರರ ಪ್ರತಿಭಟನೆಗೆ ಕನ್ನಡ ಒಕ್ಕೂಟವು ಬೆಂಬಲಕ್ಕೆ ವ್ಯಕ್ತಪಡಿಸಿ ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ‘ಕೇಂದ್ರ ಸರ್ಕಾರವು ಈ ನೌಕರರಿಗೆ ಅನ್ಯಾಯ ಮಾಡುತ್ತಿದೆ. ನ್ಯಾಯಬದ್ಧ ಹಾಗೂ ಸಂವಿಧಾನಬದ್ಧ ಬೇಡಿಕೆಗಳನ್ನು ಪ್ರಧಾನಿ ಮೋದಿ ಅವರ ಸರ್ಕಾರ ಏಕೆ ಪರಿಗಣಿಸುತ್ತಿಲ್ಲ’ ಎಂದು ಪ್ರಶ್ನಿಸಿದರು.

‘ಬುಧವಾರದೊಳಗೆ ನೌಕರರ ಎಲ್ಲ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು. ಇಲ್ಲವಾದರೆ, ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಮಾತುಕತೆ ಭರವಸೆ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿಭಟನಕಾರರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಮಾತನಾಡಿದ ಅವರು, ‘ರಾಜ್ಯದ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಮೇಲೆ ಈ ವಿಚಾರವಾಗಿ ಒತ್ತಡ ಹೇರಬೇಕು. ರಾಜ್ಯದ ಕಾಂಗ್ರೆಸ್ ಸಂಸದರ ಜತೆ ಮಾತನಾಡಿ ಒತ್ತಡ ಹೇರುವ ಬಗ್ಗೆ ಚರ್ಚೆ ನಡೆಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT