ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಮೇಶ್‌ ರಾಜೀನಾಮೆ

Last Updated 22 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ಮಡಿಕೇರಿ: ವಿಧಾನ ಪರಿಷತ್‌ ಸದಸ್ಯೆ ವೀಣಾ ಅಚ್ಚಯ್ಯ ಅವರ ಕೈಮುಟ್ಟಿದ ಪ್ರಕರಣದಲ್ಲಿ ತೀವ್ರ ವಿವಾದಕ್ಕೆ ಒಳಾಗಾಗಿದ್ದ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ.ರಮೇಶ್‌ ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್‌.ಸೀತಾರಾಂ ಸೂಚನೆ ಮೇರೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿ ಮಾಡಿ ರಾಜೀನಾಮೆ ಪತ್ರ ನೀಡಿದ್ದಾರೆ. ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.

‘ಆ. 15ರಂದು ಮಡಿಕೇರಿ ಹಳೆಯ ಕೋಟೆ ಆವರಣದಲ್ಲಿ ನಡೆದ ಸ್ವಾತಂತ್ರ್ಯದಿನಾಚರಣೆ ಕಾರ್ಯಕ್ರಮದ ವೇದಿಕೆಯಲ್ಲಿ ನಡೆದ ಘಟನೆಯ ಸತ್ಯಾಂಶದ ವರದಿಯನ್ನೂ ಈ ಪತ್ರದೊಂದಿಗೆ ಲಗತ್ತಿಸಿದ್ದೇನೆ’ ಎಂದು ಉಲ್ಲೇಖಿಸಿದ್ದಾರೆ.

‘40 ವರ್ಷದ ರಾಜಕೀಯ ಜೀವನದಲ್ಲಿ ಸಹೋದರಿಯ ಯೋಗಕ್ಷೇಮ ವಿಚಾರಿಸಿದ್ದು ಪಕ್ಷದ ದೃಷ್ಟಿಯಲ್ಲಿ ತಪ್ಪೆಂದರೆ ನನ್ನಂತಹ ಹಿರಿಯರು ಬದುಕುವುದು ಕಷ್ಟಕರ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ನೀಡಿರುವ ಪತ್ರದಲ್ಲಿ ನೋವು ತೋಡಿಕೊಂಡಿದ್ದಾರೆ.

ಕೈಮುಟ್ಟಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿತ್ತು. ಬೆಳವಣಿಗೆಯಿಂದ ಜಿಲ್ಲೆಯಲ್ಲಿ ಪಕ್ಷಕ್ಕೆ ಮುಜುಗರ ಉಂಟಾಗಿದ್ದು, ಶಿಸ್ತು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಶಿವು ಮಾದಪ್ಪ ವರಿಷ್ಠರಿಗೆ ವರದಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT