ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೌಚಾಲಯ ಕಟ್ಟಿಸಿಕೊಂಡ ಗರ್ಭಿಣಿಯರಿಗೆ ಇಂದು ‘ಸೀಮಂತ’

Last Updated 22 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ದಾವಣಗೆರೆ: ಗರ್ಭಿಣಿಯರಿರುವ ಮನೆಗಳಲ್ಲಿ ಗುಂಡಿ ತೋಡಬಾರದು ಎಂಬ ನಂಬಿಕೆ ಗ್ರಾಮೀಣ ಭಾಗದಲ್ಲಿ ಬೇರೂರಿದ್ದು, ಈಗ ಆ ನಂಬಿಕೆ ನಿಧಾನವಾಗಿ ಸರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಯಶಸ್ವಿಯಾಗುತ್ತಿದೆ. ಎರಡು ತಿಂಗಳ ಅವಧಿಯಲ್ಲಿ ಮನೆಗೆ ಶೌಚಾಲಯ ಕಟ್ಟಿಸಿಕೊಂಡ 249 ಗರ್ಭಿಣಿಯರು ‘ಸೀಮಂತ’ ಕಾರ್ಯಕ್ರಮವನ್ನು ಆಗಸ್ಟ್‌ 23ರಂದು ಜಿಲ್ಲಾ ಪಂಚಾಯ್ತಿಯಿಂದ ನಗರದ ನಿಜಲಿಂಗಪ್ಪ ಬಡಾವಣೆಯ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ಅಶ್ವತಿ ಅವರು ಕಾರ್ಯಕ್ರಮದ ವಿವರ ನೀಡಿದರು.

ತಂದೆ ತಾಯಿಯರ ಮನವೊಲಿಸಿ ಶೌಚಾಲಯ ಕಟ್ಟಿಸಿಕೊಳ್ಳಲು ನೆರವಾದ 176 ವಿದ್ಯಾರ್ಥಿಗಳನ್ನು ಹಾಗೂ ಶೌಚಾಲಯ ಕಟ್ಟಿಸಿಕೊಂಡ 35 ಬಾಣಂತಿಯರಿಗೆ ಗೌರವಿಸುವ ಕಾರ್ಯಕ್ರಮ ಇದೇ ಸಂದರ್ಭದಲ್ಲಿ ನಡೆಯಲಿದೆ. ಅವರಿಗೆ ಪ್ರಮಾಣಪತ್ರ, ಪುಸ್ತಕವನ್ನು ಉಡುಗೊರೆಯಾಗಿ ನೀಡಲಾಗುವುದು ಎಂದು ಅಶ್ವತಿ ಹೇಳಿದರು. ಈ ಮಕ್ಕಳಲ್ಲಿ ಹೆಚ್ಚಿನವರು ಜಗಳೂರು ತಾಲ್ಲೂಕಿನವರು.

ಮುಂದಿನ ಅಕ್ಟೋಬರ್‌ 2ರೊಳಗೆ ದಾವಣಗೆರೆ, ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕುಗಳನ್ನು ಬಯಲು ಶೌಚಮುಕ್ತ ತಾಲ್ಲೂಕು ಎಂದು ಘೋಷಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ನವೆಂಬರ್‌ 19ರೊಳಗೆ ಉಳಿದ ಎರಡು ತಾಲ್ಲೂಕುಗಳಾದ ಜಗಳೂರು ಮತ್ತು ಹರಪನಹಳ್ಳಿಯನ್ನು ಈ ವ್ಯಾಪ್ತಿಗೆ ತಂದು ಆ ಮೂಲಕ ಜಿಲ್ಲೆಯನ್ನು ಬಯಲು ಶೌಚಮುಕ್ತ ಎಂದು ಘೋಷಿಸಲು ಪ್ರಯತ್ನ ನಡೆದಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT