ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ ಓಪನ್‌ಗೆ ಅಜರೆಂಕಾ ಇಲ್ಲ

Last Updated 22 ಆಗಸ್ಟ್ 2017, 20:00 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಬೆಲಾರಸ್‌ನ ಟೆನಿಸ್‌ ಆಟಗಾರ್ತಿ ವಿಕ್ಟೋರಿಯಾ ಅಜರೆಂಕಾ ಅವರು ಮುಂಬರುವ ಅಮೆರಿಕ ಓಪನ್‌ ಟೆನಿಸ್‌ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

‘ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿ ಟೂರ್ನಿಯಲ್ಲಿ ಆಡುತ್ತಿಲ್ಲ. ಇದಕ್ಕಾಗಿ ಅಭಿಮಾನಿಗಳ ಕ್ಷಮೆಯಾಚಿಸುತ್ತೇನೆ’ ಎಂದು ಅವರು ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಓಪನ್‌ನಲ್ಲಿ ಎರಡು ಬಾರಿ ಪ್ರಶಸ್ತಿ ಗೆದ್ದಿದ್ದ ವಿಕ್ಟೋರಿಯಾ ಅವರು 2012 ಮತ್ತು 2013ರ ಅಮೆರಿಕ ಓಪನ್‌ ಟೂರ್ನಿಗಳಲ್ಲಿ ರನ್ನರ್‌ ಅಪ್‌ ಆಗಿದ್ದರು. ಆಗ ಎರಡು ಬಾರಿಯೂ ಅವರು ಫೈನಲ್‌ನಲ್ಲಿ ಅಮೆರಿಕದ ಸೆರೆನಾ ವಿಲಿಯಮ್ಸ್‌ ವಿರುದ್ಧ ಸೋತಿದ್ದರು.

ಅಮೆರಿಕದ ಸೆರೆನಾ ವಿಲಿಯಮ್ಸ್‌ ಅವರೂ ಈ ಬಾರಿ ಕಣಕ್ಕಿಳಿಯುತ್ತಿಲ್ಲ. ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಪ್ರಮುಖ ಆಟಗಾರರಾದ ಸ್ವಿಟ್ಜರ್‌ಲೆಂಡ್‌ನ ಸ್ಟಾನಿಸ್ಲಾಸ್‌ ವಾವ್ರಿಂಕ, ಸರ್ಬಿಯಾದ ನೊವಾಕ್‌ ಜೊಕೊವಿಚ್‌ ಮತ್ತು ಜಪಾನ್‌ನ ಕಿ ನಿಶಿಕೋರಿ ಅವರೂ ಗಾಯದ ಕಾರಣ ಹಿಂದೆ ಸರಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT