ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವರತನ್ ಕರಕುಶಲ ಮಳಿಗೆಯಲ್ಲಿ ಬೆಂಕಿ

Last Updated 22 ಆಗಸ್ಟ್ 2017, 20:24 IST
ಅಕ್ಷರ ಗಾತ್ರ

ಬೆಂಗಳೂರು: ಎಂ.ಜಿ.ರಸ್ತೆಯ ಕಾವೇರಿ ಜಂಕ್ಷನ್ ಬಳಿ ಇರುವ ನವರತನ್ ಪುರಾತನ ಕರಕುಶಲ ವಸ್ತುಗಳ ಮಳಿಗೆಯಲ್ಲಿ ಮಂಗಳವಾರ ಬೆಳಿಗ್ಗೆ 3.30ರ ಸುಮಾರಿಗೆ ಅಗ್ನಿ ಅನಾಹುತ ಸಂಭವಿಸಿದೆ.

ಮಳಿಗೆಯಿಂದ ಹೊಗೆ ಬರುತ್ತಿರುವುದನ್ನು ಕಂಡ ಭದ್ರತಾ ಸಿಬ್ಬಂದಿ ಅಗ್ನಿಶಾಮಕ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅಶೋಕ ನಗರ ವಿಭಾಗದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.

‘ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಳಿಗೆಯಲ್ಲಿದ್ದ ಕೆಲ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡು ಈ ಮಳಿಗೆಗೂ ವ್ಯಾಪಿಸಿದೆ’ ಎಂದು ಅಗ್ನಿಶಾಮಕ ಸಿಬ್ಬಂದಿಯೊಬ್ಬರು ತಿಳಿಸಿದರು.

‘ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಒಟ್ಟು 13 ಅಗ್ನಿಶಾಮಕ ವಾಹನಗಳು ಹಾಗೂ 75 ಸಿಬ್ಬಂದಿ ಮೂಲಕ ಕಾರ್ಯಾಚರಣೆ ನಡೆಸಲಾಗಿದೆ’ ಎಂದು ಉಪ ನಿರ್ದೇಶಕ ಎನ್‌.ಆರ್.ಮಾರ್ಕಂಡಯ್ಯ ಹೇಳಿದರು.

‘42 ವರ್ಷ ಹಳೆಯದಾದ ಈ ಕಟ್ಟಡದಲ್ಲಿ ಸರಿಯಾದ ಗಾಳಿ ವ್ಯವಸ್ಥೆ ಹಾಗೂ ಅಗ್ನಿ ಸುರಕ್ಷತಾ ವ್ಯವಸ್ಥೆ ಇರಲಿಲ್ಲ. ಈ ಬಗ್ಗೆ ಸ್ಪಷ್ಟೀಕರಣ ಕೋರಿ ಮಳಿಗೆಯ ವ್ಯವಸ್ಥಾಪಕರಿಗೆ ನೋಟಿಸ್ ನೀಡಿದ್ದೇವೆ.  ಉತ್ತರ ಬಂದ ಬಳಿಕ ಕ್ರಮ ಜರುಗಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT