ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘150ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕ’

Last Updated 23 ಆಗಸ್ಟ್ 2017, 8:44 IST
ಅಕ್ಷರ ಗಾತ್ರ

ಚನ್ನಗಿರಿ: ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಎರಡು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಜನರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಬೇಕು ಎಂಬ ಉದ್ದೇಶದಿಂದ ಕ್ಷೇತ್ರದ 150 ಗ್ರಾಮಗಳಲ್ಲಿ 150ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ಶಾಸಕ ವಡ್ನಾಳ್‌ ರಾಜಣ್ಣ ಹೇಳಿದರು.
ತಾಲ್ಲೂಕು ಕಚೇರಿಯ ಎದುರು ಶುದ್ಧ ಕುಡಿಯುವ ನೀರಿನ ಘಟಕವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಪಟ್ಟಣದಲ್ಲಿ ಎರಡು ಕುಡಿಯುವ ನೀರಿನ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ಮತ್ತೆ ಈಗ ಎರಡು ಘಟಕಗಳನ್ನು ಪ್ರಾರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಆರೇಳು ಘಟಕಗಳನ್ನು ಸ್ಥಾಪಿಸಲಾಗುವುದು. ಭೀಕರ ಬರಗಾಲ ಇದ್ದರೂ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲಾಗಿದೆ. ಆದರೆ, ಈ ಬಾರಿಯೂ ಕೆರೆಕಟ್ಟೆಗಳಲ್ಲಿ ನೀರು ಸಂಗ್ರಹವಾಗುವಷ್ಟು ಪ್ರಮಾಣದಲ್ಲಿ ಮಳೆ ಬಿದ್ದಿಲ್ಲ ಎಂದರು.

ಪುರಸಭೆ ಅಧ್ಯಕ್ಷ ಬಿ.ಆರ್. ಹಾಲೇಶ್, ಉಪಾಧ್ಯಕ್ಷೆ ಸುನೀತಾ ಗಣೇಶ್, ಸದಸ್ಯರಾದ ಸಿ.ಎನ್. ರಮೇಶ್, ರುದ್ರಯ್ಯ, ಸಿ.ವೈ. ರವಿಕುಮಾರ್, ಮಂಜುನಾಥ್, ಕೆ.ಆರ್. ಮಾಲತೇಶ್, ಅಸ್ಲಾಂ ಬೇಗ್, ಶಿವಕುಮಾರ್ ಮುಖ್ಯಾಧಿಕಾರಿ ಜಯ್ಯಣ್ಣ, ಜಿ.ಎಸ್. ಶಿವರುದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT