ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ ಇಂದು

Last Updated 23 ಆಗಸ್ಟ್ 2017, 8:45 IST
ಅಕ್ಷರ ಗಾತ್ರ

ದಾವಣಗೆರೆ: ನಿವೇಶನ ರಹಿತರಿಗೆ ನಿವೇಶನ ನೀಡಬೇಕು ಹಾಗೂ ಕೊಳೆಗೇರಿ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸದಸ್ಯರು ಬುಧವಾರ ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ದೇವರಾಜ ಅರಸು ಜನ್ಮ ಶತಮಾನೋತ್ಸವದ ಪ್ರಯುಕ್ತ ಬಡವರ ಹಾಗೂ ರೈತರ ಪರವಾಗಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಕೊಳೆಗೇರಿ ನಿವಾಸಿಗಳ ನಿವೇಶನ– ವಸತಿ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಉನ್ನತ ಅಧಿಕಾರ ಸಮಿತಿ ರಚಿಸಬೇಕು. ಸಮಿತಿಯಲ್ಲಿ ಹೋರಾಟ ನಿರತ ಪ್ರತಿನಿಧಿಗಳು ಇರಬೇಕು ಎಂದು ಸಮಿತಿ ಸಂಚಾಲಕ ಮೌಲಾನಾಯ್ಕ ಒತ್ತಾಯಿಸಿದರು.

ಹೋರಾಟ, ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದವರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂತೆಗೆದು ಕೊಳ್ಳಬೇಕು. ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT