ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಹೋರ್‌ ಉಪಚುನಾವಣೆ: ಷರೀಫ್ ಪತ್ನಿ ಕಣಕ್ಕೆ

Last Updated 23 ಆಗಸ್ಟ್ 2017, 19:30 IST
ಅಕ್ಷರ ಗಾತ್ರ

ಲಾಹೋರ್‌: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಅವರ ಪತ್ನಿ ಕುಲ್ಸೂಮ್ ನವಾಜ್‌ ಅವರು ಸೆಪ್ಟೆಂಬರ್‌ 17ರಂದು ರಾಷ್ಟ್ರೀಯ ಅಸೆಂಬ್ಲಿಗೆ ನಡೆಯಲಿರುವ ಚುನಾವಣೆಗೆ ಲಾಹೋರ್‌ನಿಂದ ಸ್ಪರ್ಧಿಸಲಿದ್ದಾರೆ.

ಕುಲ್ಸೂಮ್‌ ಅವರು ಗಂಟಲು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಕುಲ್ಸೂಮ್‌ ಅವರು ಚುನಾವಣೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ’ ಎಂದು ಷರೀಫ್‌ ಅವರ ರಾಜಕೀಯ ಕಾರ್ಯದರ್ಶಿ ಡಾ.ಅಸೀಫ್‌ ಕರ್ಮಣಿ ತಿಳಿಸಿದ್ದಾರೆ.

‘ಚುನಾವಣಾ ಪ್ರಚಾರದಲ್ಲಿ ಕುಲ್ಸೂಮ್‌ ಅವರು ಪಾಲ್ಗೊಳ್ಳುವ ಸಾಧ್ಯತೆ ಕಡಿಮೆ. ಆದರೆ, ಅವರ ಗೆಲುವಿಗಾಗಿ ಪಕ್ಷದ ಕಾರ್ಯಕರ್ತರು, ಮುಖಂಡರು ಶ್ರಮಿಸಲಿದ್ದಾರೆ’ ಎಂದು ತಿಳಿಸಿದ್ದಾರೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಕುಲ್ಸೂಮ್‌ ಅವರು ಪ್ರಧಾನಿಯಾಗುವ ಸಾಧ್ಯತೆಗಳಿವೆ. ಹೀಗಾಗಿ ಈ ಚುನಾವಣೆ ಮಹತ್ವ ಪಡೆದಿದೆ. ಹಾಲಿ ಪ್ರಧಾನಿ ಶಹೀದ್‌ ಖಾಕನ್‌ ಅಬ್ಬಾಸಿ ಅವರಿಂದ ರಾಜೀನಾಮೆ ಪಡೆಯಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT