ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿತನದ ಹಕ್ಕು ಮೂಲಭೂತ ಹಕ್ಕು: ಸುಪ್ರೀಂಕೋರ್ಟ್‌

Last Updated 24 ಆಗಸ್ಟ್ 2017, 5:48 IST
ಅಕ್ಷರ ಗಾತ್ರ

ನವದೆಹಲಿ: ‘ಖಾಸಗಿತನದ ಹಕ್ಕು ಮೂಲಭೂತ ಹಕ್ಕು’ ಎಂದು ಬಗ್ಗೆ ಸುಪ್ರೀಂಕೋರ್ಟ್‌ ಗುರುವಾರ ತೀರ್ಪು ನೀಡಿದೆ.

‘ಸಂವಿಧಾನದ 21ನೇ ವಿಧಿಯಡಿ ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಬಹುದು’ ಎಂದು ನ್ಯಾಯಮೂರ್ತಿ ಜೆ. ಚಲಮೇಶ್ವರ್‌ ತಿಳಿಸಿದ್ದಾರೆ.

‘ಖಾಸಗಿತನದ ಹಕ್ಕು ಮೂಲಭೂತ ಹಕ್ಕೇ’ ಎಂಬ ಬಗ್ಗೆ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ನೇತೃತ್ವದ ಒಂಬತ್ತು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಆಗಸ್ಟ್‌ 2ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಬೇಕೇ ಬೇಡವೇ ಎಂಬ ವಿಚಾರವಾಗಿ ನ್ಯಾಯಪೀಠವು ಮೂರು ವಾರಗಳಲ್ಲಿ ಆರು ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿತ್ತು.

ಇವನ್ನೂ ಓದಿ...
ಇದೊಂಚೂರು ಖಾಸಗಿ...
ಖಾಸಗಿತನದ ರಕ್ಷಣೆ ‘ಸೋಲುತ್ತಿರುವ ಯುದ್ಧ’

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT