ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇವದಾಸಿ ಪದ್ಧತಿ ನಿರ್ಮೂಲನೆ ಅಗತ್ಯ’

Last Updated 28 ಆಗಸ್ಟ್ 2017, 6:48 IST
ಅಕ್ಷರ ಗಾತ್ರ

ಕೆಂಭಾವಿ: ‘ದೇವದಾಸಿ ಪದ್ಧತಿ ಸಾಮಾಜಿಕ ಪಿಡುಗಾಗಿದ್ದು, ಇದನ್ನು ಹೋಗಲಾಡಿಸಲು ಪ್ರತಿಯೊಬ್ಬರೂ ಮುಂದಾಗಬೇಕು’ ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ಯೋಜನಾಧಿಕಾರಿ ಎಸ್. ಎನ್. ಹಿರೇಮಠ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ದೇವದಾಸಿ ಮಹಿಳೆಯರಿಗಾಗಿ ನಡೆದ ತಾಲ್ಲೂಕು ಮಟ್ಟದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು, ‘ಸುರಪುರ ತಾಲ್ಲೂಕಿನಲ್ಲಿ ಒಟ್ಟು 620 ಮಹಿಳೆಯರು ದೇವದಾಸಿಯರಿದ್ದು ಈ ಎಲ್ಲ ಮಹಿಳೆಯರಿಗೆ ಸರ್ಕಾರ ವಸತಿ, ಮಾಸಾಶನ ನೀಡುತ್ತಿದೆ, ದೇವದಾಸಿ ಪದ್ಧತಿ ನಿರ್ಮೂಲನೆಗೆ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಅವುಗಳನ್ನು ಸಮಗ್ರವಾಗಿ ಕಾರ್ಯರೂಪಕ್ಕೆ ತರಲು ಪ್ರತಿಯೊಬ್ಬರ ಸಹಕರಿಸಬೇಕು’ ಎಂದು ಹೇಳಿದರು.

ಡಾ. ದೇವಕೆಮ್ಮ ಹಂಗರಗಿ, ಡಾ. ವಿಶ್ವನಾಥ ಬಿರಾದಾರ, ಡಾ. ರಕ್ಷಿತಾ ನ್ಯಾಮಗೊಂಡ, ಶುಶ್ರೂಶಕಿ ಶೋಭಾ ಇದ್ದರು. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ತಾಲ್ಲೂಕು ಅಧಿಕಾರಿ ಮಲ್ಲಿಕಾರ್ಜುನ ಸ್ವಾಗತಿಸಿದರು, ಶಾಂತಿಲಾಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT