ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಹಾಪುರ: ಮುಂದುವರಿದ ಮಳೆ

Last Updated 28 ಆಗಸ್ಟ್ 2017, 6:52 IST
ಅಕ್ಷರ ಗಾತ್ರ

ಶಹಾಪುರ: ತಾಲ್ಲೂಕಿನಲ್ಲಿ ನಾಲ್ಕು ದಿನದಿಂದ ಮಳೆ ಸುರಿಯುತ್ತಿದೆ. ಜಿಟಿ ಜಿಟಿ ಮಳೆಯಿಂದ ತಗ್ಗು ಪ್ರದೇಶದಲ್ಲಿ ನೀರು ಸಂಗ್ರಹವಾಗಿವೆ. ಜನರಿಗೆ ತಂಪಾದ ಅನುಭೂತಿ ನೀಡಿದೆ. ಉತ್ತಮ ರೀತಿಯಲ್ಲಿ ಮಳೆಯಾಗುತ್ತಿದೆ. ಆದರೆ ಜನಜೀವನಕ್ಕೆ ತೊಂದರೆಯಾಗಿರುವ ಅಥವಾ ಹಾನಿಯಾಗಿರುವ ಬಗ್ಗೆ ಮಾಹಿತಿ ದೊರೆತಿಲ್ಲ’ ಎಂದು ತಹಶೀಲ್ದಾರ ಸೋಮಶೇಖರ ಹಾಗರಗುಂಡಗಿ ತಿಳಿಸಿದರು.

‘ಶನಿವಾರ ರಾತ್ರಿ ಸುರಿದ ಮಳೆಯಿಂದ ತಾಲ್ಲೂಕಿನ ತುಮಕೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನೀರು ನಿಂತಿದೆ. ಅಲ್ಲದೆ ಜಮೀನುಗಳ ತಗ್ಗು ಪ್ರದೇಶದಲ್ಲಿ ನೀರು ನಿಂತಿದ್ದು, ಮಳೆ ಜೊತೆಗೆ ಮೋಡ ಕವಿದ ವಾತಾವರಣದಿಂದ ತುಂಪು ಹೆಚ್ಚಾಗಿ ಹತ್ತಿ, ಮೆಣಸಿನಕಾಯಿ ಬೆಳೆಗೆ ರೋಗದ ಭೀತಿ ಉಂಟಾಗಿದೆ’ ಎಂದು ರೈತ ನಾಗಪ್ಪ ತಿಳಿಸಿದರು.

ನಗರದ ಹಳೆ ಬಸ್ ನಿಲ್ದಾಣದ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ತಗ್ಗು ಪ್ರದೇಶದಲ್ಲಿರುವ ನಿಲ್ದಾಣದ ಆವರಣದಲ್ಲಿ ನೀರು ನಿಂತಿದ್ದು, ಪ್ರಯಾಣಿಕರ ಓಡಾಟಕ್ಕೆ ತೊಂದರೆಯಾಗಿದೆ.

ನಿಲ್ದಾಣದಲ್ಲಿ ಅಲ್ಲಲ್ಲಿ ನೀರು ನಿಂತಿರುವ ಪ್ರಯಾಣಿಕರಿಗೆ ಓಡಾಡಲು ತೊಂದರೆಯಾಗಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಸಾಧ್ಯವಾದಷ್ಟು ಬೇಗ ಅದರ ನಿವಾರಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಮಲ್ಲಣ್ಣ ಶಿರಡ್ಡಿ ಕೋರಿದ್ದಾರೆ. ಕೃಷಿ ಚಟುವಟಿಕೆಗೆ ಈ ಮಳೆಯು ಪೂರಕವಾಗಿದೆ. ಭಾನುವಾರ ಸಹ ಉತ್ತಮ ಮಳೆಯಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಡಾ.ದಾನಪ್ಪ ಕತ್ನಳ್ಳಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT