ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7 ವರ್ಷವಾದರೂ ನನಸಾಗದ ಶಿಕ್ಷಕರ ಸೂರಿನ ಕನಸು

Last Updated 30 ಆಗಸ್ಟ್ 2017, 6:32 IST
ಅಕ್ಷರ ಗಾತ್ರ

ಕುರುಗೋಡು: ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮದ ಸರ್ಕಾರಿ ಬಾಲಕರ ಪ್ರೌಢಶಾಲೆ ಆವರಣದಲ್ಲಿ ನಿರ್ಮಾಣ ಹಂತದ ಪ್ರಾಥಮಿಕ ಶಾಲಾ ಶಿಕ್ಷಕರ ವಸತಿ ಗೃಹ ಕಟ್ಟಡ ಪೂರ್ಣಗೊಳ್ಳುವ ಮೊದಲೇ ಶಿಥಿಲಾವಸ್ಥೆಗೆ ತಲುಪಿದೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಳ್ಳಾರಿ ಜಿಲ್ಲೆಯಿಂದ 2004ರಲ್ಲಿ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಜಿಲ್ಲೆಯ ಅಭಿವೃದ್ಧಿಗೆ ₹3,300 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿತ್ತು. ಈ ಅನುದಾನವನ್ನು ರಸ್ತೆ, ಶಿಕ್ಷಣ ಮತ್ತು ಆರೋಗ್ಯ ಇಲಾಖೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಬಳಸಿಕೊಳ್ಳುವ ಉದ್ದೇಶವಿತ್ತು. 

ಇದೇ ಅನುದಾನದಲ್ಲಿ 2008ರಲ್ಲಿ ಸಿರಿಗೇರಿ ಗ್ರಾಮದಲ್ಲಿ ಶಿಕ್ಷಕರಿಗಾಗಿ ಎರಡು ಅಂತಸ್ತಿನ 16 ವಸತಿ ಗೃಹ ಗಳನ್ನು ನಿರ್ಮಿಸಲು ಭೂಸೇನಾ ನಿಗ ಮಕ್ಕೆ ಕಾಮಗಾರಿ ವಹಿಸಲಾಗಿತ್ತು.ಕಾಮಗಾರಿ ಆರಂಭಿಸಿ 7 ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳದೆ ಶಿಕ್ಷಕರ ಸೂರಿನ ಕನಸು ನನಸಾಗಿಲ್ಲ.

ನಿರ್ಮಾಣ ಹಂತದಲ್ಲಿರುವ ಕಟ್ಟಡದ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಜನವಸತಿ ಪ್ರದೇಶದಿಂದ ದೂರ ಇರುವುದರಿಂದ ಕೆಲವು ಕಿಡಿಗೇಡಿಗಳು ಮಲ ಮೂತ್ರ ವಿಸರ್ಜನೆಗೆ ಕಟ್ಟಡವನ್ನು ಬಳಸಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರಿಗೆ ಇದು ಅನೈತಿಕ ಚಟುವಟಿಕೆಗಳ ತಾಣ ವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

2011ರಲ್ಲಿ ₹ 3 ಲಕ್ಷ ಅನುದಾನ ಬಿಡುಗಡೆಯಾಗಿತ್ತು. ಇಷ್ಟಾದರೂ ಕಟ್ಟಡ ಪೂರ್ಣಗೊಂಡಿಲ್ಲ. ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಅಧಿಕಾರಿ ಗಳ ಗಮನಕ್ಕೆ ತಂದರೂ ಪ್ರಯೋಜನ ವಾಗಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಸಂತ ಗೌಡ ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT