ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 9.5 ಕೋಟಿಯಲ್ಲಿ ಮೊರಾರ್ಜಿ ಶಾಲೆ

Last Updated 30 ಆಗಸ್ಟ್ 2017, 7:23 IST
ಅಕ್ಷರ ಗಾತ್ರ

ಚಾಮರಾಜನಗರ: ‘ತಾಲ್ಲೂಕಿನ ಹರವೆ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣಕ್ಕಾಗಿ ಸರ್ಕಾರ ₹ 9.5 ಕೋಟಿ ಅನುದಾನ ಬಿಡುಗಡೆಗೊಳಿಸಿದೆ’ ಎಂದು ಶಾಸಕಿ ಎಂ.ಸಿ.ಮೋಹನ್‌ಕುಮಾರಿ ಹೇಳಿದರು.

ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಪ್ರೌಢ ಶಾಲೆ ವಿಭಾಗದ 8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್, ಸಮವಸ್ತ್ರ, ನೋಟ್‌ಪುಸ್ತಕ ಹಾಗೂ ಶೂ ವಿತರಿಸಿ ಅವರು ಮಾತನಾಡಿದರು.

ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕಾಗಿ ₹ 50 ಲಕ್ಷ, ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕಾಗಿ ₹ 50 ಲಕ್ಷ ಮಂಜೂರಾಗಿದ್ದು, ಈ ಪೈಕಿ ತಲಾ ₹ 25 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದರು.

‘ಪೋಷಕರು ಮಕ್ಕಳಿಗೆ ಬಾಲ್ಯವಿವಾಹ ಮಾಡಿ ಅವರನ್ನು ಕಷ್ಟದ ಕೂಪಕ್ಕೆ ತಳ್ಳಬಾರದು. ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು. ಸರ್ಕಾರ ಪ್ರತಿ ಮಗುವಿಗೂ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಕಡ್ಡಾಯ ಶಿಕ್ಷಣ ಜಾರಿಗೊಳಿಸಿದೆ. ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಶ್ರಮಪಟ್ಟು ಓದಿ ಪೋಷಕರು ಹಾಗೂ ಶಾಲೆಗೆ ಕೀರ್ತಿ ತರಬೇಕು. ವಿದ್ಯಾರ್ಥಿ ಜೀವನದಲ್ಲಿ ದೊರೆಯುವ ಅವಕಾಶ ಬಳಸಿಕೊಳ್ಳಬೇಕು. ಪೋಷಕರ ಕಷ್ಟಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಹೇಳಿದರು.

ಜಿ.ಪಂ. ಸದಸ್ಯ ಕೆರೆಹಳ್ಳಿ ನವೀನ್, ಮಾಜಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ಜನ್ಮದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಅವರ ಭಾವಚಿತ್ರವುಳ್ಳ ನೋಟ್‌ಪುಸ್ತಕ ವಿತರಿಸಲಾಗಿದೆ. ಜಿ.ಪಂ.ನಿಂದ ದೊರೆಯುವ ಅನುದಾನದಡಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸಲಾಗು ವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಶೋಭಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಟ್ಟಮ್ಮ, ಸದಸ್ಯರಾದ ಗಿರೀಶ್, ಮಹದೇವಸ್ವಾಮಿ, ಎಪಿಎಂಸಿ ನಿರ್ದೇಶಕಿ ಸುಂದ್ರಮ್ಮ, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ನಿರ್ದೇಶಕ ಮಕ್ಕಡಹಳ್ಳಿ ರವಿಕುಮಾರ್, ಡೈರಿ ಅಧ್ಯಕ್ಷ ರೇವಣ್ಣ, ಎಸ್‌ಡಿಎಂಸಿ ಅಧ್ಯಕ್ಷ ತಿರುಪತಿನಾಯಕ, ಪ್ರಾಂಶುಪಾಲರಾದ ರಾಜಮ್ಮಣಿ, ಉಪಪ್ರಾಂಶುಪಾಲ ಸಿದ್ದರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT