ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರಲ್‌ ತಿಮ್ಮಯ್ಯ ಸ್ಮಾರಕಕ್ಕೆ ಅನುದಾನ

Last Updated 2 ಸೆಪ್ಟೆಂಬರ್ 2017, 7:28 IST
ಅಕ್ಷರ ಗಾತ್ರ

ಮಡಿಕೇರಿ: ಜನರಲ್ ಕೆ.ಎಸ್. ತಿಮ್ಮಯ್ಯ ಸ್ಮಾರಕ ಭವನ, ಕನ್ನಡ ಸಮುಚ್ಚಯ ಭವನ ಹಾಗೂ ಕುಶಾಲನಗರದ ಕನ್ನಡ ಕಲಾಭವನ ಕಾಮಗಾರಿಗಳಿಗೆ ಬಾಕಿಯಿರುವ ಅನುದಾನ ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ಭರವಸೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ ಅವರನ್ನು ಭೇಟಿ ಮಾಡಿ ಇಲಾಖೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿ, ಅನುದಾನ ಬಳಕೆ ಪ್ರಮಾಣ ಪತ್ರ ಹಾಗೂ ಅಗತ್ಯವಿರುವ ಅನುದಾನದ ಬಗ್ಗೆ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಿದರು.

ವಿನ್ಸೆಂಟ್ ಡಿಸೋಜ ಮಾತನಾಡಿ, ಜನರಲ್ ಕೆ.ಎಸ್. ತಿಮ್ಮಯ್ಯ ಸ್ಮಾರಕವನ್ನು ₹ 1.45 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಉಳಿದ ಹಣವನ್ನು ಬಿಡುಗಡೆ ಮಾಡುವಂತೆ ಕೋರಿದರು.

ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಸುವರ್ಣ ಸಮುಚ್ಚಯ ಕಲಾಭವನ ನಿರ್ಮಾಣಕ್ಕೆ ₹4 ಕೋಟಿ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಈಗಾಗಲೇ ₹1.7 ಕೋಟಿ ಬಿಡುಗಡೆಯಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದರು.

ಕುಶಾಲನಗರದ ಕಲಾಭವನ ನಿರ್ಮಾಣಕ್ಕೆ ₹ 3.99 ಕೋಟಿ ಆಡಳಿತಾತ್ಮಕ ಅನುಮೋದನೆ ದೊರೆತು ಕಾಮಗಾರಿ ಪೂರ್ಣಗೊಂಡಿದೆ. ಆದರೆ ಹಣ ಬಳಕೆ ಪ್ರಮಾಣ ಪತ್ರವನ್ನು ಸಲ್ಲಿಸಿರುವುದಿಲ್ಲ. ಒಳ ವಿನ್ಯಾಸ, ಕುರ್ಚಿ, ಧ್ವನಿವರ್ಧಕ ಅಳವಡಿಸಲು ಮತ್ತು ವಿನ್ಯಾಸ ಮಾಡಲು ಹೆಚ್ಚುವರಿಯಾಗಿ ₹ 2 ಕೋಟಿ ಅನುದಾನ ಬಿಡುಗಡೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಸಚಿನ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಸಹಾಯಕ ಎಂಜಿನಿಯರ್ ಚೆನ್ನಕೇಶವ ಇದ್ದರು.

ಮಹತ್ವದ ದಾಖಲೆ ಸಂರಕ್ಷಣೆ: 1834ರಿಂದ 1950ರವರೆಗೆ ಕೊಡಗು ಮುಖ್ಯ ಆಯುಕ್ತರ (ಕೊಡಗು ಚೀಫ್ ಕಮಿಷನರ್) ಅವಧಿಯಲ್ಲಿನ ಮಹತ್ವದ ದಾಖಲೆಗಳನ್ನು ಸರ್ಕಾರ ಗಣಕೀಕರಣ- ಮಾಡಲು ಬಜೆಟ್‌ನಲ್ಲಿ ಪ್ರಕಟಿಸಿದ್ದು, ಈ ಸಂಬಂಧ ಅಗತ್ಯ ಸಿದ್ಧತೆ ಕೈಗೊಳ್ಳುವ ಸಂಬಂಧವೂ ಸಭೆಯಲ್ಲಿ ಚರ್ಚೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT