ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ವಿರುದ್ಧ ಪ್ರಕರಣ ರಾಜಕೀಯ ಪಿತೂರಿ

Last Updated 3 ಸೆಪ್ಟೆಂಬರ್ 2017, 6:27 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿ ಯೂರಪ್ಪ ವಿರುದ್ಧ ಪ್ರಕರಣ ದಾಖಲಿ ಸಿರುವುದು ರಾಜಕೀಯ ಪಿತೂರಿ’ ಎಂದು ಬಿಎಲ್‌1 ಪ್ರಮುಖ ಬಿ.ರಾಮಾ ನಾಯ್ಕ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಶನಿವಾರ ನಡೆದ ಬಿಜೆಪಿ ಪಕ್ಷದ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.‘ಸೇಡಿನ ರಾಜಕಾರಣ ಮಾಡುತ್ತಿರುವ ಸಿಎಂ ಎಸಿಬಿಯನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆ. ಪ್ರಕರಣಗಳನ್ನು ದಾಖಲಿಸುವ ಮೂಲಕ ಬ್ಲಾಕ್‌ಮೇಲ್‌ ತಂತ್ರ ಅನುಸರಿಸುತ್ತಿದ್ದಾರೆ’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಚ್. ಮಲ್ಲಿಕಾರ್ಜುನ ಮಾತನಾಡಿ, ‘ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ರೂಪಿಸಬೇಕಿದೆ, ಕ್ಷೇತ್ರದಲ್ಲಿ ಸಂಘಟನೆಯನ್ನು ಇನ್ನೂ ಬಲಗೊಳಿಸುವ ಅಗತ್ಯ ಇದೆ’ ಎಂದು ತಿಳಿಸಿದರು. ಪಕ್ಷದ ಮಂಡಲ ಪ್ರಧಾನ ಕಾರ್ಯದರ್ಶಿ ಜೆ.ಬಿ.ಶರಣಪ್ಪ ಪ್ರಾಸ್ತಾವಿಕ ವಾಗಿ ಮಾತನಾಡಿದರು.

ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಅಧ್ಯಕ್ಷ ಮುಟುಗನಹಳ್ಳಿ ಕೊಟ್ರೇಶ್, ಪುರಸಭೆ ಸದಸ್ಯ ಬಾದಾಮಿ ಮೃತ್ಯುಂಜಯ, ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ರೇಣುಕಾ ಕೆ.ಎಚ್.ನಾಯ್ಕ, ಉಪಾಧ್ಯಕ್ಷ ಬಂಗಾರಿ ಮಂಜುನಾಥ, ಮುಖಂಡ ಕಿನ್ನಾಳ್ ಸುಭಾಷ್ , ತಾಲ್ಲೂಕು ಪಂಚಾಯಿತಿ ಸದಸ್ಯ ಮಾಳಗಿ ಗಿರೀಶ್, ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪೂಜಪ್ಪ, ಸದಸ್ಯ ವೀರಯ್ಯ ಸ್ವಾಮಿ, ಜಿಲ್ಲಾ ಮಹಿಳಾ ಘಟ ಕದ ಕಾರ್ಯದರ್ಶಿ ವೀಣಾ ವಿವೇಕಾ ನಂದ ಗೌಡ ಇದ್ದರು. ಮಂಡಲ ಅಧ್ಯಕ್ಷ ನರೇಗಲ್‌ ಕೊಟ್ರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸ್ಲಂ ಮೋರ್ಚಾದ ಅಧ್ಯಕ್ಷರನ್ನಾಗಿ ದೇವರ ಮನಿ ನೀಲಪ್ಪ ಅವರನ್ನು ಆಯ್ಕೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT