ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುತ್ತಿನಕೊಪ್ಪ ಶಾಲೆಗೆ ಹೈಟೆಕ್ ಸ್ಪರ್ಶ

Last Updated 3 ಸೆಪ್ಟೆಂಬರ್ 2017, 9:25 IST
ಅಕ್ಷರ ಗಾತ್ರ

ಪ್ರಸ್ತುತ ದಿನಗಳಲ್ಲಿ ಖಾಸಗಿ ಶಾಲೆಗಳಲ್ಲಿನ ಇಂಗ್ಲಿಷ್ ಮಾಧ್ಯಮದತ್ತ ವಿದ್ಯಾರ್ಥಿಗಳು ಆಕರ್ಷಿತರಾಗುತ್ತಿದ್ದಾರೆ. ಹಾಗಾಗಿ ಬಹುತೇಕ ಸರ್ಕಾರಿ ಶಾಲೆ ಮುಚ್ಚುತ್ತಿವೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಇಂತಹ ಸನ್ನಿವೇಶದಲ್ಲಿ ಸರ್ಕಾರಿ ಶಾಲೆಯತ್ತ ಮಕ್ಕಳನ್ನು ಆಕರ್ಷಿಸಲು ಹಾಗೂ ಸರ್ಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿ, ಹಳೇವಿದ್ಯಾರ್ಥಿ ಸಂಘ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿದೆ.

ನರಸಿಂಹರಾಜಪುರ ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿ 1920ರಲ್ಲಿ ಪ್ರಾರಂಭವಾಗಿರುವ ಸರ್ಕಾರಿ ಹಿರಿಯ ಮಾದರಿ ಶಾಲೆ ಪ್ರಸ್ತುತ ಶತಮಾನದ ಹೊಸ್ತಿಲಿನಲ್ಲಿದ್ದು ಖಾಸಗಿ ಶಾಲೆಗಳ ರೀತಿಯಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲು ಶಾಲಾಭಿವೃದ್ಧಿ ಸಮಿತಿ ಕಾರ್ಯಪ್ರವೃತ್ತವಾಗಿದೆ. ಇವರ ಈ ಕಾರ್ಯಕ್ಕೆ ಹಲವು ದಾನಿಗಳು, ಶಾಲೆಯ ಹಳೆಯ ವಿದ್ಯಾರ್ಥಿಗಳು ಆಸರೆಯಾಗಿ ನಿಂತಿದ್ದಾರೆ.

ಸದರಿ ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ 170 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿ ದ್ದಾರೆ. 6ಮತ್ತು 7ನೇತರಗತಿಯಲ್ಲಿ ಇಂಗ್ಲಿಷ್ ಮಾಧ್ಯಮ ದಲ್ಲಿ ಶಿಕ್ಷಣವನ್ನು ನೀಡಲಾಗುತ್ತಿದೆ.

ಖಾಸಗಿ ಶಾಲೆಯಂತೆ ಈ ಸರ್ಕಾರಿ ಶಾಲೆಯಲ್ಲೂ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಪಠ್ಯವನ್ನು ಬೋಧಿ ಸುವ ಸೌಲಭ್ಯವನ್ನು ಒದಗಿಸಲು ಸ್ಮಾರ್ಟ್ ಕಾಸ್ಲ್ ಪರಿಕರವನ್ನು ಅಳವಡಿಸುವ ಕಾರ್ಯ ಆರಂಭವಾಗಿದೆ. ಸೋಲಾರ್ ವಿದ್ಯುತ್ ಸೌಲಭ್ಯ ವನ್ನೊಳಗೊಂಡಿರುವ ಸ್ಮಾರ್ಟ್ ಕ್ಲಾಸ್ ಗೆ ತಗಲುವ ₹50 ಸಾವಿರ ವೆಚ್ಚವನ್ನು ಕಣಿವೆ ವಿನಯ್ ಹಾಗೂ ಡಾ. ನವೀನ್ ಸಹೋದ ರರು ತಮ್ಮ ಪೋಷಕರಾದ ಕೆ.ಬಿ.ನಾಗರಾಜ್ ಮತ್ತು ಚಂದ್ರಾವತಿ ಅವರ ಸ್ಮರಣಾರ್ಥ ಕೊಡುಗೆಯಾಗಿ ನೀಡಿದ್ದಾರೆ.

ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜೈಬುನ್ನಿಸಾ ಅವರ ಪುತ್ರ ಪ್ರಸ್ತುತ ಅಮೇರಿ ಕಾದಲ್ಲಿಿರುವ ಶಾಲೆಯ ಹಳೆಯ ವಿದ್ಯಾರ್ಥಿ ತನ್ವಿರ್ ಪಾಷ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಸದರಿ ಶಾಲೆಯಲ್ಲಿ ಎಲ್‌ಕೆಜಿ ಪ್ರಾರಂಭಿಸುವುದರ ಮೂಲಕ ಶಾಲೆಯನ್ನು ಅಭಿವೃದ್ಧಿ ಪಡಿಸಲು ಈಗಾಗಲೇ ಹರ್ಷ ಅವರ ಅಧ್ಯಕ್ಷತೆಯಲ್ಲಿ ಹಳೇ ವಿದ್ಯಾರ್ಥಿ ಸಂಘವನ್ನು ಸಹ ಅಸ್ಥಿತ್ವಕ್ಕೆ ತರಲಾಗಿದೆ. ಸರ್ಕಾರ ವಿದ್ಯಾರ್ಥಿಗಳ ಸಂಖ್ಯೆಗೆ ಅನು ಗುಣವಾಗಿ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡುತ್ತಿರುವುದರಿಂದ ಶಿಕ್ಷಕರ ಮೇಲೆ ಹೆಚ್ಚಿನ ಕಾರ್ಯಭಾರದ ಒತ್ತಡವಿದೆ.

ಹಾಗಾಗಿ ಶಾಲೆಯಲ್ಲಿ ಖಾಸಗಿ ಶಾಲೆಯ ರೀತಿಯಲ್ಲಿ ಶಿಕ್ಷಣ ನೀಡಲು ವಿಶೇಷವಾಗಿ ಇಂಗ್ಲಿಷ್ ಮತ್ತು ಕಂಪ್ಯೂಟರ್ ಶಿಕ್ಷಕರನ್ನು ಶಿಕ್ಷಣ ಇಲಾಖೆಯ ಸಹಕಾರರೊಂದಿಗೆ ನೇಮಿಸಿಕೊಂಡು ಶಾಲಾಭಿವೃದ್ಧಿ ಸಮಿತಿ ಹಾಗೂ ಹಳೇ ವಿದ್ಯಾರ್ಥಿ ಸಂಘದವರಿಂದ ವೇತನ ನೀಡುವ ಚಿಂತನೆಯನ್ನು ಸಹ ನಡೆಸ ಲಾಗಿದೆ. ಶಾಲೆಯಲ್ಲಿ ಎಲ್ಲಾ ಆಧುನಿಕ ಸೌಲಭ್ಯ ಒದಗಿಸಿ ಕಾನ್ವೆಂಟ್ ಶಾಲೆಗಳ ರೀತಿಯಲ್ಲಿಯೇ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ. ಇದಕ್ಕೆ ಪೋಷಕರ ಸಹಕಾರ ಅಗತ್ಯ.

ಮಕ್ಕಳು (ಮೈಡ್ ಫ್ರಿ ಎಜುಕೇಷನ್) ಒತ್ತಡದಿಂದ ಶಿಕ್ಷಣ ಪಡೆಯದೆ ಲವಲವಿ ಕೆಯಿಂದ ಶಿಕ್ಷಣ ಕಲಿಯುವಂತೆ ಮಾಡುವುದು ಶಾಲಾಭಿವೃದ್ಧಿ ಸಮಿತಿ ಉದ್ದೇಶವಾಗಿದೆ ಎನ್ನುತ್ತಾರೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸಿ.ಎಲ್.ಮನೋಹರ.

ಶಿಕ್ಷಣ ಎಲ್ಲರಿಗೂ ಸಮಾನವಾಗಿ ದೊರೆಯಬೇಕಾದರೆ. ಸರ್ಕಾರಿ ಶಾಲೆ ಅಭಿವೃದ್ಧಿಯಾಗಬೇಕಾದರೆ ಸರ್ಕಾರಿ ಶಾಲೆ ಶಿಕ್ಷಕರು, ಸರ್ಕಾರಿ ನೌಕರರು, ಎಲ್ಲ ಹಂತದ ಚುನಾಯಿತ ಪ್ರತಿನಿಧಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಎಲ್ಲರೂ ಸಹಕಾರನೀಡಬೇಕೆಂದು ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರ್ಷ ಮನವಿ ಮಾಡುತ್ತಾರೆ.

ಸರ್ಕಾರಿ ಶಾಲೆಗೆ ಆಧುನಿಕ ಸೌಲಭ್ಯ ಒದಗಿಸಿ ಸರ್ಕಾರಿ ಶಾಲೆ ಉಳಿವಿಗಾಗಿ ಗ್ರಾಮಸ್ಥರು,ಪೋಷಕರು ಶಾಲಾಭಿವೃದ್ಧಿ ಸಮಿತಿಯವರು ಕೈಗೊಳ್ಳುವ ಕಾರ್ಯಕ್ಕೆ ಕಾನೂನು ವ್ಯಾಪ್ತಿಯಲ್ಲಿ ಎಲ್ಲಾ ಸಹಕಾರ ನೀಡಲಾಗುವುದು. ಈಗಾಗಲೇ ಸದರಿ ಶಾಲೆಗೆ 6ನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ಬೋಧನೆಗೆ ಅನುಮೋದನೆ ನೀಡಲಾಗಿದೆ ಎನ್ನುತ್ತಾರೆ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನಾಗರಾಜ್.

ತಾಲ್ಲೂಕಿನಲ್ಲಿರುವ ಮಾದರಿ ಹಿರಿಯ ಪ್ರಾಥಮಿಕ ಶಾಲೆಗಲ್ಲಿ ಇಲ್ಲಿನ ಸರ್ಕಾರಿ ಶಾಲೆಯು ಸಹ ಒಂದಾಗಿದೆ. ಪ್ರಾತ್ಯಕ್ಷಿಕೆಯ ಮೂಲಕ ಪಠ್ಯದ ಬೋಧನೆ ಮಕ್ಕಳಿಗೆ ವಿಷಯವನ್ನು ಪರಿಣಾಮಕಾರಿಯಾಗಿ ಗ್ರಹಿಸಿಕೊಳ್ಳಲು ಸುಲ ಭವಾಗಲಿದೆ. ಕಲಿಕೆಗೆ ಆಧುನಿಕ ಸೌಲಭ್ಯ ಒದ ಗಿಸುವ ನಿಟ್ಟಿನಲ್ಲಿ ಶಾಲಾಭಿವೃದ್ಧಿ ಸಮಿತಿ, ಹಳೇವಿದ್ಯಾರ್ಥಿ ಸಂಘ, ಸಮುದಾಯದವರ ಕಾರ್ಯ ಶ್ಲಾಘನೀಯವಾಗಿದೆ ಎನ್ನುತ್ತಾರೆ ಮುಖ್ಯಶಿಕ್ಷಕಿ ರಾಧಾ.

ಸರ್ಕಾರಿ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದಿಂದ ವಿದ್ಯಾರ್ಥಿಗಳು ಶಾಲೆಗೆ ಬರಲು ಅನು ಕೂಲವಾಗುವಂತೆ ದಾನಿಗಳ ನೆರವಿನಿಂದ ಬಸ್ ಸೌಲಭ್ಯ ಒದಗಿಸಲು ಸಹ ಚಿಂತನೆ ನಡೆಸಲಾಗಿದೆ. ಸರ್ಕಾರಿ ಶಾಲೆಯಲ್ಲಿ ಸಮಾಜ ಮುಖಿ ಚಿಂತನೆ ಸಾಕಾರಗೊಳ್ಳಲು ಜನಪ್ರತಿನಿಧಿಗಳು, ದಾನಿಗಳು ನೆರವು ನೀಡಬೇಕೆನ್ನುತ್ತಾರೆ ಶಾಲಾ ಭಿವೃದ್ಧಿ ಸಮಿತಿ ಅಧ್ಯಕ್ಷ ಸಿ.ಎಲ್ ಮನೋಹರ್. ಸಂರ್ಪಕ್ಕಾಗಿ –99729–69235, 94837–65760
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT