ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಪತಿ ಮೆರವಣಿಗೆ ವೇಳೆ ಗಲಾಟೆ, ಲಾಠಿ ಪ್ರಹಾರ

Last Updated 3 ಸೆಪ್ಟೆಂಬರ್ 2017, 9:53 IST
ಅಕ್ಷರ ಗಾತ್ರ

ಚಿಕ್ಕಜಾಜೂರು: ಸಮೀಪದ ಗುಂಜಿಗನೂರಿನಲ್ಲಿ ಶನಿವಾರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಒಂದೇ ಸಮುದಾಯದ ಪಂಗಡಗಳ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಬೀಸಿದ್ದಾರೆ ಎನ್ನಲಾಗಿದೆ. ಮೂವರು ಗಾಯಗೊಂಡಿದ್ದಾರೆ.

ಚಂದ್ರಪ್ಪ (65), ನೀಲಮ್ಮ (66) ಹಾಗೂ ಸಿದ್ದಮ್ಮ (50) ಗಾಯಗೊಂಡವರು. ಗಲಭೆಯ ಬಗ್ಗೆ ಮಾಹಿತಿ ಪಡೆದ ಹೆಚ್ಚುವರಿ ಎಸ್‌ಪಿ ಲಕ್ಷ್ಮಣ್‌ ನಿಂಬರಗಿ ಹಾಗೂ ಸಿಪಿಐ ಮಧುಸೂದನ್‌ ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಘಟನೆ ಸಂಬಂಧ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಎಎಸ್‌ಪಿ, ರಾತ್ರಿ 8ರ ಸುಮಾರಿಗೆ ಮೆರವಣಿಗೆ ಬರುತ್ತಿರುವಾಗ, ಮಾರ್ಗ ಮಧ್ಯೆ ಯಾರೊ ಕಾರು ನಿಲ್ಲಿಸಿದ್ದಾರೆ. ಈ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಆರಂಭವಾಗಿದೆ. ಪೊಲೀಸರು ಗಲಾಟೆಯನ್ನು ನಿಯಂತ್ರಿಸುವ ಭರದಲ್ಲಿ ರಸ್ತೆಯ ಬದಿಯಲ್ಲಿ ನಿಂತಿದ್ದ ಕೆಲವರು ಬಿದ್ದಿದ್ದಾರೆ ಎಂದು ಮಾಹಿತಿ ನೀಡಿದರು. ಈ ಬಗ್ಗೆ ದೂರು ದಾಖಲಾಗಿಲ್ಲ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT