ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೀಣಿಸಿದ ಒಳಹರಿವು: ನದಿಗೆ 6,000 ಕ್ಯುಸೆಕ್ ನೀರು

Last Updated 4 ಸೆಪ್ಟೆಂಬರ್ 2017, 6:52 IST
ಅಕ್ಷರ ಗಾತ್ರ

ಹುಣಸಗಿ: ಸಮೀಪದ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಒಳಹರಿವು ಕ್ಷೀಣಿಸಿದ ಕಾರಣ ಭಾನುವಾರ ಬೆಳಿಗ್ಗೆ 11 ಗಂಟೆಯಿಂದ ಜಲಾಶಯದ ಕ್ರಸ್ಟ್‌ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ ಹರಿಸುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ.

‘ಬಸವಸಾಗರ ಜಲಾಶಯಕ್ಕೆ 15 ಸಾವಿರ ಕ್ಯುಸೆಕ್ ಒಳಹರಿವು ಇದೆ. ಜಲಾಶಯದ ಮಟ್ಟವನ್ನು ಕಾಯ್ದುಕೊಂಡು ನಾರಾಯಣಪುರ ಎಡದಂಡೆ ಮತ್ತು ಬಲದಂಡೆ ಮುಖ್ಯ ಕಾಲುವೆಗೆ 9 ಸಾವಿರ ಕ್ಯುಸೆಕ್ ಮತ್ತು ನದಿಗೆ 6 ಸಾವಿರ ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ’ ಎಂದು ಜಲಾಶಯದ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ತಂಬಿದೊರೈ
ತಿಳಿಸಿದರು. ನಾರಾಯಣಪುರ ಜಲಾಶಯದ ನೀರಿನ ಮಟ್ಟ ಭಾನುವಾರ 492.25 ಮೀಟರ್ (33 ಟಿಎಂಸಿ ಅಡಿ) ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT