ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

769ನೇ ದಿನಕ್ಕೆ ಮಹದಾಯಿ ಹೋರಾಟ

Last Updated 5 ಸೆಪ್ಟೆಂಬರ್ 2017, 4:55 IST
ಅಕ್ಷರ ಗಾತ್ರ

ನವಲಗುಂದ: ಮಹದಾಯಿ ಹಾಗೂ ಕಳಸಾ–ಬಂಡೂರಿ ಯೋಜನೆ ಜಾರಿಗೆ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಳದ ಬಾರಿ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ ರೈತರು ಹೋರಾಟ ವೇದಿಕೆಯಲ್ಲಿ ಪ್ರತಿಭಟನೆ ಮುಂದುವರಿಸಿದರು.

‘ಗೋವಾ ಹಾಗೂ ಮಹಾರಾಷ್ಟ್ರದ ವಿರೋಧ ಪಕ್ಷದವರ ಮನವೊಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಲ್ಲಿನ ಆಡಳಿತ ಪಕ್ಷದವರ ಮನನೊಲಿಸುವುದಾಗಿ ಬಿಜೆಪಿ ಮುಖಂ ಡರುತೀರ್ಮಾನ ಮಾಡಿಕೊಂಡಿದ್ದರು. ಆದರೆ, ಇವತ್ತಿನವರೆಗೂ ಆ ಕೆಲಸ ಮಾಡದೇ ಕಾಲಹರಣ ಮಾಡುತ್ತಿದ್ದಾರೆ’ ಎಂದು ಸುಭಾಸಚಂದ್ರಗೌಡ ಪಾಟೀಲ ಆರೋಪಿಸಿದರು.

‘ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಅವರು ಆಮರಣ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವೇಳೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಅವರು ಸಹ ಇತ್ತ ತಿರುಗಿ ನೋಡದೇ ರಾಜಕಾರಣ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಪ್ರಚಾರಕ್ಕೆ ಹೋಗುವ ಜನಪ್ರತಿನಿಧಿಗಳಿಗೆ ರೈತರ ತಕ್ಕ ಪಾಠ ಕಲಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

 ‘ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು, ಬೆಳೆವಿಮೆ ಪರಿಹಾರ ನೀಡಬೇಕು, ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಪ್ರತಿ ಎಕರೆಗೆ ₹25 ಸಾವಿರ ಪರಿಹಾರವನ್ನು ಇದೇ 10 ರೊಳಗೆ ಈಡೇರಿಸದಿದ್ದರೆ ಆಮರಣ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದು ಅನಿವಾರ್ಯ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT