ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರಾಕಾರ ಮಳೆ:ಮನೆಗೆ ನುಗ್ಗಿದ ನೀರು

Last Updated 6 ಸೆಪ್ಟೆಂಬರ್ 2017, 5:56 IST
ಅಕ್ಷರ ಗಾತ್ರ

ಮಸ್ಕಿ: ಪಟ್ಟಣದಲ್ಲಿ ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಯಾಗಿದೆ. ಮಳೆಯಿಂದಾಗಿ ಧನಗಾರವಾಡಿ, ಕೇಂದ್ರ ಪ್ರಾಥಮಿಕ ಶಾಲಾ ಆವರಣದಲ್ಲಿ ನೀರು ನುಗ್ಗಿದ್ದರಿಂದ ಶಾಲಾ ವಿದ್ಯಾರ್ಥಿಗಳು ತರಗತಿಗೆ ಹೋಗಲು ಮಂಗಳವಾರ ಹರ ಸಾಹಸ ಪಟ್ಟರು. ಪುರಸಭೆ ಸಿಬ್ಬಂದಿ ಬಂದು ನೀರು ಹೊರ ಹೋಗುವಂತೆ ವ್ಯವಸ್ಥೆ ಮಾಡಿದರು.

ವಾಲ್ಮೀಕಿ ವೃತ್ತದಿಂದ ಕನಕವೃತ್ತದವರೆಗೆ ಇರುವ ಹೆದ್ದಾರಿ ಪಕ್ಕದಲ್ಲಿ ಚರಂಡಿಯಲ್ಲಿ ಹೂಳು ತುಂಬಿದ್ದರಿಂದ ಚರಂಡಿ ನೀರು ರಸ್ತೆ ಮೇಲೆ ಹರಿದಿದೆ. ಚರಂಡಿಯ ಕಸದ ರಾಶಿ ರಸ್ತೆ ಮೇಲೆ ಬಿದ್ದು ಗಲೀಜು ವಾತಾವರಣ ನಿರ್ಮಾಣವಾಗಿದೆ.

ಚರಂಡಿಯಲ್ಲಿನ ಹೂಳು ತೆಗೆದು ನೀರು ಹರಿದು ಹೋಗುವಂತೆ ಕ್ರಮ ಕೈಗೊಳ್ಳಿ ಎಂದು ಪುರಸಭೆಗೆ ಹಲವಾರು ಭಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಮಳೆ ಹಾಗೂ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದರಿಂದ ಈಚೆಗೆ ಮಾಡಿದ ಹೆದ್ದಾರಿ ಮತ್ತೆ ಹಾಳಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪುರಸಭೆಯ ಆರೋಗ್ಯ ಇಲಾಖೆಯ ಅಧಿಕಾರಿ ಶಹನವಾಜ್‌, ವಾರ್ಡ್‌ ಸದಸ್ಯ ಕಿರಣ್‌ ಸಾನಬಾಳ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಚರಂಡಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭೆ ಅಧ್ಯಕ್ಷ ಮೌನೇಶ ಮುರಾರಿ ತಿಳಿಸಿದ್ದಾರೆ. ಗಾಂಧಿನಗರ, ಸೋಮನಾಥ ನಗರ ಸೇರಿದಂತೆ ಕೆಲವೊಂದು ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿರುವ ಬಗ್ಗೆ ವರದಿ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT