ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯಪಾನ ನಿರ್ಮೂಲನೆಗೆ ಜನಜಾಗೃತಿ

Last Updated 6 ಸೆಪ್ಟೆಂಬರ್ 2017, 6:15 IST
ಅಕ್ಷರ ಗಾತ್ರ

ಚಾಮರಾಜನಗರ: ‘ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಮಕ್ಕಳು, ಮಹಿಳೆಯರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ’ ಎಂದು ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಎಚ್.ಸಿ. ರುದ್ರಪ್ಪ ಹೇಳಿದರು.

ಮದ್ಯಪಾನ ಸೇವನೆಯನ್ನು ನಿಲ್ಲಿಸಲು ಸರ್ಕಾರ, ಸಮಾಜ, ಸಂಘ ಸಂಸ್ಥೆಗಳು, ವಿದ್ಯಾ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ಒಟ್ಟಾಗಿ ಜನರಲ್ಲಿ ಅರಿವು ಮೂಡಿಸುವುದು ಅವಶ್ಯವಾಗಿದೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಬೀದಿ ನಾಟಕ ಪ್ರದರ್ಶನದ ಮೂಲಕ ಜನಜಾಗೃತಿ, ಶಾಲಾ ಕಾಲೇಜುಗಳಲ್ಲಿ ವಿಚಾರ ಸಂಕಿರಣ, ಹೆದ್ದಾರಿ ಫಲಕಗಳಲ್ಲಿ ಜಾಗೃತಿ ಸಂದೇಶಗಳ ಪ್ರದರ್ಶನ, ವಿಶ್ವ ಮಾದಕ ವಸ್ತು ವಿರೋಧಿ ಕಾರ್ಯಕ್ರಮಗಳನ್ನು ರಾಜ್ಯ ಮದ್ಯಪಾನ ಸಂಯಮ ಮಂಡಳಿಯಿಂದ ಆಯೋಜಿಸಲಾಗಿದೆ ಎಂದರು.

ಜಿಲ್ಲಾಡಳಿತ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘಗಳು, ಆಶಾ ಕಾರ್ಯಕರ್ತೆಯರು ಒಗ್ಗೂಡಿ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತ ಬೃಹತ್ ಜಾಗೃತಿ ಕಾರ್ಯಕ್ರಮವನ್ನು ರಾಜ್ಯದೆಲ್ಲೆಡೆ ಹಮ್ಮಿಕೊಳ್ಳುವ ಮೂಲಕ ಮದ್ಯವ್ಯಸನಿಯರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ವಿವರಿಸಿದರು.

ಮದ್ಯಪಾನ ವ್ಯಸನಮುಕ್ತ ಗ್ರಾಮ ನಿರ್ಮಾಣ ಮಾಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದಲ್ಲಿನ ಜಾತ್ರೆ ಹಾಗೂ ದಸರಾ ಹಬ್ಬದ ಸಂದರ್ಭದಲ್ಲಿ ಮಂಡಳಿಯಿಂದ ವಸ್ತುಪ್ರದರ್ಶನ ಮಳಿಗೆ ಪ್ರಾರಂಭಿಸಿ ಜನರಲ್ಲಿ ಅರಿವು ಮೂಡಿಸುವುದು. ಆಕಾಶವಾಣಿ ಮತ್ತು ದೂರದರ್ಶನ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮದ್ಯಪಾನ ಸಂಯಮ ಮಂಡಳಿಯ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯ ನಿರ್ದೇಶಕ ಚಂದ್ರು ಸೇರಿದಂತೆ ಅಬಕಾರಿ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT