ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ಹೂಡಿಕೆ ₹ 51,000 ಕೋಟಿ

Last Updated 31 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ಹೂಡಿಕೆದಾರರು 2017ರಲ್ಲಿ ದೇಶದ ಷೇರುಪೇಟೆಯಲ್ಲಿ ₹ 51,000 ಕೊಟಿ ಬಂಡವಾಳ ತೊಡಗಿಸಿದ್ದಾರೆ. ಈ ಮೊತ್ತದಲ್ಲಿ ಮಾರ್ಚ್‌ ತಿಂಗಳಿನಲ್ಲಿಯೇ ₹ 30,906 ಕೋಟಿ ಹೂಡಿಕೆಯಾಗಿದೆ.

ಡಿಸೆಂಬರ್‌ನಲ್ಲಿ ದೇಶದ ಷೇರುಪೇಟೆಯಿಂದ ₹ 5,900 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದಾರೆ. ಆದರೆ ಸಾಲಪತ್ರ ಮಾರುಕಟ್ಟೆಯಲ್ಲಿ ₹ 2,350 ಕೋಟಿ ಹೂಡಿಕೆ ಮಾಡಿದ್ದಾರೆ.

ವಿತ್ತೀಯ ಕೊರತೆ ಅಂತರ ಹೆಚ್ಚಾಗಿರುವುದು ಮತ್ತು ಕಚ್ಚಾ ತೈಲ ಬೆಲೆ ಏರಿಕೆ ಕಾಣುತ್ತಿರುವುದರಿಂದ ವಿದೇಶಿ ಹೂಡಿಕೆದಾರರು ಬಹಳ ಎಚ್ಚರಿಕೆಯಿಂದ ಬಂಡವಾಳ ತೊಡಗಿಸುತ್ತಿದ್ದಾರೆ.

ಅಕ್ಟೋಬರ್‌ ಅಂತ್ಯಕ್ಕೆ ವಿತ್ತೀಯ ಕೊರತೆ ಅಂತರ ಶೇ 96.1ಕ್ಕೆ ಏರಿಕೆ ಕಂಡಿದೆ. 2018ರಲ್ಲಿ ವಿದೇಶಿ ಬಂಡವಾಳ ಹೊರಹರಿವು ತಗ್ಗಲಿದೆ. ಅಭಿವೃದ್ಧಿ ಹೊಂದಿದ ದೇಶಗಳ ಆರ್ಥಿಕ ವೃದ್ಧಿ ದರ ಹೆಚ್ಚಾಗಲಿದ್ದು, ನಗದು ಹರಿವಿನ ಪ್ರಮಾಣದಲ್ಲಿಯೂ ಏರಿಕೆ ಕಂಡುಬರಲಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT