ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರಿಗಾಗಿ ಕಡಿಮೆ ದರದಲ್ಲಿ ಜಮೀನು

Last Updated 6 ಸೆಪ್ಟೆಂಬರ್ 2017, 8:57 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಗರದ ಹೊರಭಾಗದ ತಿಪ್ಪಾಪುರ ಸಮೀಪ ಶಿಕ್ಷಕರಿಗಾಗಿ ಕಡಿಮೆ ದರದಲ್ಲಿ ಜಮೀನುಗಳನ್ನು ನೀಡಲು 20 ಎಕರೆ ಭೂಮಿಯನ್ನು ಗುರುತಿಸಲಾಗಿದೆ ಎಂದು ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು. ಅವರು ನಗರದ ಮಾಂಗಲ್ಯ ಕಲ್ಯಾಣ ಮಂಟಪದಲ್ಲಿ ಮಂಗಳವಾರ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಜಮೀನುಗಳನ್ನು ವಿತರಿಸುವ ಕುರಿತಾದ ಬೆಲೆ ಮೊದಲಾದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ದೊಡ್ಡಬಳ್ಳಾಪುರದ ನೇಕಾರರಿಗೆ ಈ ಸಾಲಿನಲ್ಲಿ 206 ಮನೆಗಳನ್ನು ಕಟ್ಟಿಕೊಡಲಾಗಿದೆ’ ಎಂದರು. ರಾಜ್ಯ ಸರ್ಕಾರ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣಕ್ಕೆ ಅಗತ್ಯ ಇರುವ ಎಲ್ಲಾ ರೀತಿಯ ಆರ್ಥಿಕ ನೆರವನ್ನು ನೀಡುತ್ತಿದೆ ಎಂದರು.

ಕೇಂದ್ರ ರೇಷ್ಮೆ ಮಂಡಲಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಮಾತನಾಡಿ, ವಿಧಾನ ಪರಿಷತ್ ಸದಸ್ಯ ರಾಮಚಂದ್ರಗೌಡ ಅವರು ತಾಲ್ಲೂಕಿಗೂ ಹೆಚ್ಚಿನ ಅನುದಾನ ನೀಡಿರುವುದು ಅಭಿನಂದನೀಯ. ಶಿಕ್ಷಣಕ್ಕೆ ಒತ್ತು ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.

ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಬೆಂಗಳೂರು ಉತ್ತರ ವಿ.ವಿ ಕುಲಸಚಿವ ಡಾ.ಸುಂದರರಾಜ ಅರಸ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್‌.ವಿ.ಶ್ರೀವತ್ಸ, ತಹಶೀಲ್ದಾರ್ ಬಿ.ಎ.ಮೋಹನ್, ನಗರಸಭೆ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಉಪಾಧ್ಯಕ್ಷೆ ಜಯಲಕ್ಷ್ಮೀ, ಸ್ಥಾಯಿ ಸಮಿತಿ ಅಧ್ಯಕ್ಷ ಸುಶೀಲ, ಜಿಲ್ಲಾ ಪಂಚಾಯಿತಿ ಸದಸ್ಯೆ ಪದ್ಮಾವತಿ ಮುನೇಗೌಡ, ಡಿಎಸ್‌ಪಿ ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ರಂಗಪ್ಪ, ಟಿಎಪಿಎಂಸಿ ನಿರ್ದೇಶಕ ಎಂ.ಗೋವಿಂದರಾಜ್ ಹಾಜರಿದ್ದರು.

ಮಧುರೆ ಶನಿಮಹಾತ್ಮ ದೇವಸ್ಥಾನದ ಅಧ್ಯಕ್ಷ ಗೋಪಿನಾಥ್‌,ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್‌.ಸಿದ್ದಗಂಗಯ್ಯ, ಕಾರ್ಯದರ್ಶಿ ಬಸವಲಿಂಗಯ್ಯ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಉಪಾಧ್ಯಕ್ಷ ಎಂ.ಎಸ್‌.ರಾಜಶೇಖರ್‌ ವಿವಿಧ ಶಿಕ್ಷಕ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT