ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋರಕ್ಷಣೆ ಹೆಸರಲ್ಲಿ ನಡೆಯುವ ಹಿಂಸಾಚಾರ ತಡೆಗೆ ಕ್ರಮ ಕೈಗೊಳ್ಳಿ: ಸುಪ್ರೀಂ ಕೋರ್ಟ್‌

Last Updated 6 ಸೆಪ್ಟೆಂಬರ್ 2017, 10:04 IST
ಅಕ್ಷರ ಗಾತ್ರ

ನವದೆಹಲಿ: ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಪರಿಣಾಮಕಾರಿಯಾಗಿ ತಡೆಯಲು ಪ್ರತಿ ಜಿಲ್ಲೆಯಲ್ಲೂ ನೋಡಲ್ ಅಧಿಕಾರಿಯನ್ನು ನೇಮಕ ಮಾಡುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟಲು ಕೈಗೊಳ್ಳಲಾದ ಕ್ರಮಗಳ ಬಗ್ಗೆ ಸ್ಥಿತಿಗತಿ ವರದಿ ಸಲ್ಲಿಸುವಂತೆ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದ ನ್ಯಾಯಪೀಠ ಸೂಚಿಸಿದೆ.

ಸಂವಿಧಾನದ 256ನೇ ವಿಧಿ ಅನ್ವಯ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಪೀಠ ಸೂಚನೆ ನೀಡಿದೆ.

ಮಹಾತ್ಮ ಗಾಂಧಿ ಅವರ ಮೊಮ್ಮಗ ತುಷಾರ್ ಗಾಂಧಿ ಅವರು ಗೋರಕ್ಷಣೆ ಹೆಸರಿನಲ್ಲಿ ನಡೆಯುವ ಹಿಂಸಾಚಾರಕ್ಕೆ ಸಂಬಂಧಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT