ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಿ ಹತ್ಯೆ ಖಂಡಿಸಿ ಪ್ರತಿಭಟನೆ

Last Updated 7 ಸೆಪ್ಟೆಂಬರ್ 2017, 9:20 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಖಂಡಿಸಿ ಪತ್ರಕರ್ತರ ಸಂಘ ಸೇರಿದಂತೆ ವಿವಿಧ ಕನ್ನಡ ಪರ, ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಹಂತಕರನ್ನು ಬಂಧಿಸುವಂತೆ ಆಗ್ರಹಿಸಿ ತಹಶೀಲ್ದಾರ್‌ ಮೂಲಕ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.

‘ರಾಜ್ಯದಲ್ಲಿ ಪ್ರಗತಿಪರ ಚಿಂತನೆಯನ್ನು ಹತ್ತಿಕ್ಕುವ ವ್ಯವಸ್ಥಿತ ಪಿತೂರಿಗಳು ನಡೆಯುತ್ತಿವೆ. ನಾಗರಿಕರು, ಸಂವಿಧಾನದ ಪರವಾಗಿ ಮಾತನಾಡುವವರನ್ನು ಹತ್ಯೆ ಮಾಡುವ ಮೂಲಕ ಸಂವಿಧಾನ ವಿರೋಧಿಗಳು ಮಾತ್ರ ಇಲ್ಲಿ ಬದುಕಲು ಸಾಧ್ಯ ಎನ್ನುವಂತಹ ವಾತಾವರಣ ನಿರ್ಮಾಣವಾಗುತ್ತಿದೆ’ ಎಂದರು.

ಕಲ್ಯಾಣ ರಾಜ್ಯದ ಕನಸನ್ನು ಹೊತ್ತು ಜಾರಿಗೆ ಬಂದಿರುವ ಸಂವಿಧಾನದ ಆಶಯಗಳನ್ನು ಜಾರಿಗೆ ತರಬೇಕಾಗಿರುವ ಸರ್ಕಾರಗಳು ಸಹ ಹತ್ಯೆಕೋರರನ್ನು ಬಂಧಿಸುವಲ್ಲಿ ವಿಫಲವಾಗುತ್ತಿವೆ ಎಂದರು.

ಕಾರ್ಯನಿತರ ಪತ್ರಕರ್ತರ ಸಂಘ,ಕಾರ್ಯನಿರತ ಪತ್ರಕರ್ತರ ಕ್ಷೇಮಾಭಿವೃದ್ಧಿ ಟ್ರಸ್ಟ್‌, ಕರವೇ ಪ್ರವೀಣಶೆಟ್ಟಿ ಬಣ),ಸಿಪಿಎಂ, ಕರವೇ (ಶಿವರಾಮೇಗೌಡ ಬಣ) ಕರುನಾಡ ಸೇನೆ, ಕನ್ನಡ ಪಕ್ಷ, ಜಯ ಕರ್ನಾಟಕ, ಕನ್ನಡ ಸಾಹಿತ್ಯ ಪರಿಷತ್‌, ಮಹಿಳಾ ಸಮಾಜ, ದಲಿತ ಸಂಘಟನೆ, ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆ, ಭುವನೇಶ್ವರ ಕನ್ನಡ ಸಂಘ, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT