ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಿಲಂಕೇಶ್ ಹತ್ಯೆ ಖಂಡಿಸಿ ಪ್ರತಿಭಟನೆ

Last Updated 7 ಸೆಪ್ಟೆಂಬರ್ 2017, 9:40 IST
ಅಕ್ಷರ ಗಾತ್ರ

ಮಳವಳ್ಳಿ: ಪತ್ರಕರ್ತರು, ಸಾಹಿತಿಗಳು ಹಾಗೂ ಜನಪರ ಚಿಂತಕರಾದ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಸಿಪಿಐಎಂನ ಕಾರ್ಯಕರ್ತರು ಬುಧವಾರ ಪಟ್ಟಣದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪಟ್ಟಣದ ಬಸ್‌ ನಿಲ್ದಾಣದ ಬಳಿಯಿಂದ ಹೊರಟ ಪ್ರತಿಭಟನಾಕಾರರು ಪ್ರಮುಖ ರಸ್ತೆಯಲ್ಲಿ ಸಂಚರಿಸಿ ತಾಲ್ಲೂಕು ಕಚೇರಿ ಮುಂದೆ ಜಮಾವಣೆಗೊಂಡು ಹತ್ಯೆಯನ್ನು ತೀವ್ರವಾಗಿ ಖಂಡಿಸಿ ಕೊಲೆಗಡುಕರನ್ನು ಕೂಡಲೇ ಬಂಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರಾಮಕೃಷ್ಣ, ಎಂ.ಪುಟ್ಟಮಾದು, ಎನ್‌.ಎಲ್.ಭರತ್‌ರಾಜ್‌, ತಿಮ್ಮೇಗೌಡ, ಕೃಷ್ಣೇಗೌಡ, ಗುರುಸ್ವಾಮಿ, ಲಿಂಗರಾಜಮೂರ್ತಿ, ಶಿವಮಲ್ಲು, ಶಿವಕುಮಾರ್ ಇದ್ದರು.

ಪತ್ರಕರ್ತರ ಆಕ್ರೋಶ: ಗೌರಿ ಲಂಕೇಶ್‌ ಅವರ ಹತ್ಯೆ ಖಂಡಿಸಿ ಪಟ್ಟಣದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕೈಗೆ ಕಪ್ಪು ಬಟ್ಟೆ ಕಟ್ಟಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ತಹಶೀಲ್ದಾರ್ ದೀನೇಶ್‌ಚಂದ್ರ ಮನವಿ ಸ್ವೀಕರಿಸಿ ತಮ್ಮ ಮನವಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡುವುದಾಗಿ ಹೇಳಿದರು.ನಾಗೇಶ್, ಪ್ರಭಾಕರ್, ದಿವಾಕರ್, ಶಿವಮಲ್ಲು, ಶಿವಕುಮಾರ್, ಉಮೇಶ್, ಸ್ವಾಮಿ ಭಾಗವಹಿಸಿದ್ದರು.

ಖಂಡನೆ
ನಾಗಮಂಗಲ:
ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವುದನ್ನು ಖಂಡಿಸಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಎ.ಎಚ್.ಬಾಲಕೃಷ್ಣ, ಗದ್ದೆ ಭೂವನಹಳ್ಳಿ ದೇವರಾಜು, ಸೀತರಾಮು, ಸಿ.ಎನ್. ಮಂಜುನಾಥ, ಪಿ.ಜೆ. ಜಯರಾಮು, ದೇವಾನಂದ್, ಚಂದ್ರಮೌಳಿ, ಹರೀಶ್, ಪುಟ್ಟರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT