ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾಲಿಂಗೇಶ್ವರರ ಅದ್ಧೂರಿ ರಥೋತ್ಸವ

Last Updated 8 ಸೆಪ್ಟೆಂಬರ್ 2017, 6:16 IST
ಅಕ್ಷರ ಗಾತ್ರ

ಮಹಾಲಿಂಗಪುರ: ಪಟ್ಟಣದ ಆರಾಧ್ಯ ದೈವ ಮಹಾಲಿಂಗೇಶ್ವರ ರಥೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆಯಿತು. ಜಗಮಗಿಸುವ ದೀಪ ಹಾಗೂ ಹೂಗಳಿಂದ ಅಲಂಕೃತಗೊಂಡಿದ್ದ ತೇರಿಗೆ ಶ್ರೀಮಠದ ಪೀಠಾಪತಿ ಶಿವಯೋಗಿ  ಮಹಾಲಿಂಗೇಶ್ವರ ರಾಜೇಂದ್ರ ಸ್ವಾಮೀಜಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

ಸಾವಿರಾರು ಭಕ್ತರಿಂದ ಶ್ರೀ ಮಹಾಲಿಂಗೇಶ್ವರ ಮಹಾರಾಜಕಿ ಜೈ ಎಂಬ ಜಯಘೋಷಗಳೊಂದಿಗೆ ತೇರನ್ನು ಸಂಭ್ರಮ–ಸಡಗರದಿಂದ ಎಳೆಯಲಾಯಿತು. ಮಹಾಲಿಂಗೇಶ್ವರರ ಕರ್ತೃ ಗದ್ದುಗೆಗೆ ಮೂರು ಹೊತ್ತು ವಿಶೇಷ ಪೂಜೆ ಹಾಗೂ ಹೂವಿನ ಅಲಂಕಾರಗಳನ್ನು ಮಾಡಲಾಗಿತ್ತು.

ತುಂಬಿದ ತೇರು ಸಾಗುವ ಮುನ್ನ ಮಹಾಲಿಂಗೇಶ್ವರ ದೇವಸ್ಥಾನದ  ಪಾದಗಟ್ಟಿಯ ಮುಂದೆ ನಿರ್ಮಿಸಲಾದ ಹರಿವಾಣ ಕಟ್ಟೆಯ ಲೂಟಿ ಕಾರ್ಯಕ್ರಮ ಜರುಗಿತು. ನೂರಾರು ರೈತರು ತಮ್ಮ ತಮ್ಮ  ಜಮೀನುಗಳಲ್ಲಿ ಬೆಳೆದ ಗೋವಿನ ಜೋಳ, ಬಾಳೆಗಿಡ, ಕಬ್ಬು ಸೇರಿದಂತೆ ಹಲವು ತರಹದ ಬೆಳೆಗಳನ್ನು ತಂದು ಪಾದಗಟ್ಟೆಯ ಮುಂದಿನ ಹಂದರ ಮೇಲೆ ಹಾಕಿದ್ದರು. 

ಶ್ರೀಗಳು ಪೂಜೆ ಮಾಡಿ ಮಂಗಳಾರತಿ ಸಲ್ಲಿಸಿದ ನಂತರ ಸಂಪ್ರದಾಯದಂತೆ ಅಲ್ಲಿದ್ದ ಕಬ್ಬು, ತೆನೆ, ಇತ್ಯಾದಿಗಳನ್ನು ಭಕ್ತರು ಒಬ್ಬರ ಮೇಲೊಬ್ಬರು ಬೀಳುತ್ತ ದೋಚಿಕೊಂಡು ಹೋಗುವಲ್ಲಿ ಯಶಸ್ವಿಯಾದರು. ಇಲ್ಲಿ ದೋಚಿಕೊಂಡು ಹೋದ ಬೆಳೆಯನ್ನು ಮನೆಯಲ್ಲಿಟ್ಟು ಪೂಜಿಸಿದರೆ ಯಾವು ಕಾಲಕ್ಕೂ ಅನ್ನದ ಕೊರತೆಯಾಗುವುದಿಲ್ಲ ಎಂಬುದು ಭಕ್ತಾದಿಗಳ ನಂಬಿಕೆ. ಈ ಸಮಯದಲ್ಲಿ ಜನದಟ್ಟಣೆಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ರಥೋತ್ಸವದ ಮುಂದೆ ಉಚ್ಚಾಯಿ, ನಂದಿಕೋಲು, ಕರಡಿ ಮಜಲು, ಶಹನಾಯ್‌, ಕರಡಿ ಮೇಳದವರು  ರಥೋತ್ಸವದ ಮೆರಗನ್ನು ಹೆಚ್ಚಿಸಿದ್ದರು. ರಥೋತ್ಸವವು ಶ್ರೀಮಠದಿಂದ ನಡಚೌಕಿ ಮಾರ್ಗವಾಗಿ ಚನ್ನಗಿರೇಶ್ವರ ದೇವಸ್ಥಾನ  ತಲುಪಿತು. ರಥೋತ್ಸವನ್ನು ವೀಕ್ಷಿಸಲು ಬೆಳಗಾವಿ, ವಿಜಯಪುರ, ಬಾಗಲಕೋಟ, ಹುಬ್ಬಳ್ಳಿ, ದಾವಣಗೆರೆ, ಬೆಂಗಳೂರ ಸೇರಿದಂತೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಭಕ್ತರು ಬಂದಿದ್ದರು.

ದೀಡ್‌ ನಮಸ್ಕಾರ
ಜಾತ್ರೆಯ ನಿಮಿತ್ತ ಪಟ್ಟಣದ ಹಾಗೂ ಸುತ್ತ-ಮುತ್ತಲಿನ ಹಳ್ಳಿಗಳ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ರಾತ್ರಿ 12 ರಿಂದ ಸಂಜೆ 5ವರೆಗೂ ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ಸಾವಿರಾರು ಭಕ್ತರು ಪವಿತ್ರ ಬಸವ ತೀರ್ಥದಲ್ಲಿ ಸ್ನಾನ ಮಾಡಿ ಒದ್ದೆ ಬಟ್ಟೆಯಲ್ಲಿ ಶ್ರೀಮಠದವರೆಗೆ ದೀಡ್‌ ನಮ ಸ್ಕಾರ ಹಾಕುವುದರೊಂದಿಗೆ ಹರಕೆ ಸಲ್ಲಿಸಿದರು. ಮುಸ್ಲಿಂ ಸಮು ದಾಯದ ಪುರುಷ, ಮಹಿಳೆ ಯರೂ ದೀಡ್‌ ನಮಸ್ಕಾರ  ಹಾಕಿದ್ದು ವಿಶೇಷವಾಗಿತ್ತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT