ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ: ಮರಾಠಾ ಸಮಾಜದಿಂದ ಬೃಹತ್ ರ‍್ಯಾಲಿ

Last Updated 8 ಸೆಪ್ಟೆಂಬರ್ 2017, 6:40 IST
ಅಕ್ಷರ ಗಾತ್ರ

ಭಾಲ್ಕಿ: ಮರಾಠಾ ಸಮಾಜವನ್ನು ಪ್ರವರ್ಗ 3ಬಿ ಯಿಂದ 2ಎ ಸೇರ್ಪಡೆಗೆ ಆಗ್ರಹಿಸಿ ಪಟ್ಟಣದಲ್ಲಿ ಗುರುವಾರ ಏಕ್‌ ಮರಾಠಾ ಲಾಕ್‌ ಮರಾಠಾ ಕ್ರಾಂತಿ ಮೌನ ಮೋರ್ಚಾ ವತಿಯಿಂದ ಬೃಹತ್ ರ‍್ಯಾಲಿ  ನಡೆಸಲಾಯಿತು.

ಪಟ್ಟಣದ ಶಿವಾಜಿ ವೃತ್ತದಿಂದ ಆರಂಭಗೊಂಡ ರ‍್ಯಾಲಿ ಸುಭಾಷ ಚಂದ್ರ ಬೋಸ್ ವೃತ್ತ, ಮಹಾತ್ಮ ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಸಾಗಿ ತಾಲ್ಲೂಕು ಕಚೇರಿ ಎದುರಿನ ಮುಖ್ಯ ರಸ್ತೆಯಲ್ಲಿ ಸಮಾವೇಶಗೊಂಡಿತು.

ಮನವಿ ಪತ್ರವನ್ನು ಸಮಾಜದ ವಿದ್ಯಾರ್ಥಿಗಳು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿ, ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಶಿಫಾರಸಿನಂತೆ   ಮರಾಠಾ ಸಮಾಜವನ್ನು 3ಬಿ ಪ್ರವರ್ಗದಿಂದ 2ಎಗೆ ಸೇರ್ಪಡೆ ಮಾಡಬೇಕು, ತೆಲಗು ಮಾದರಿಯಲ್ಲಿ ಮರಾಠಿ ಭಾಷೆಗೆ ಅಲ್ಪಸಂಖ್ಯಾತ ಭಾಷಾ ಸ್ಥಾನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಶಾಂತಿಯುತ, ನ್ಯಾಯಸಮ್ಮತ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಸಿದ್ದಾರೆ. ಪಟ್ಟಣ ಸೇರಿದಂತೆ ತಾಲ್ಲೂಕಿನ ನಾನಾ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಮರಾಠಾ ಸಮಾಜದ ಜನರು ಭಾಗವಹಿಸಿದ್ದರು.

ರ‍್ಯಾಲಿಗೆ ಮಾಜಿ ಶಾಸಕ ಪ್ರಕಾಶ ಖಂಡ್ರೆ, ಮುಖಂಡ ಡಿ.ಕೆ.ಸಿದ್ರಾಮ, ಹಣಮಂತರಾವ ಚವ್ಹಾಣ, ಎಪಿಎಂಸಿ ಅಧ್ಯಕ್ಷ ಗೋವಿಂದರಾವ ಬಿರಾದಾರ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಗೋವಿಂದರಾವ ಬಿರಾದರ ಸೇರಿದಂತೆ ನಾನಾ ಸಂಘಟನೆಯ ಮುಖಂಡರು ಬೆಂಬಲಿಸಿದರು. ಡಿವೈಎಸ್ಪಿ ವೆಂಕನಗೌಡ ಪಾಟೀಲ್ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT