ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಿ ಲಂಕೇಶ್‌ ಹತ್ಯೆ ಪ್ರಕರಣ– ತನಿಖೆ ಸಿಬಿಐಗೆ ವಹಿಸಿ: ಡಿ.ವಿ.

Last Updated 8 ಸೆಪ್ಟೆಂಬರ್ 2017, 9:11 IST
ಅಕ್ಷರ ಗಾತ್ರ

ಉಡುಪಿ: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದ ಸತ್ಯಾಂಶ ಹೊರಬರಬೇಕಾದರೆ ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿದ ಅವರು, ‘ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇದೆ. ಆದರೆ, ಗೃಹ ಇಲಾಖೆ ಮೇಲೆ ಇಲ್ಲ. ಡಿವೈಎಸ್ಪಿ ಗಣಪತಿ ಪ್ರಕರಣ ಇದಕ್ಕೆ ಉತ್ತಮ ಉದಾಹರಣೆ. ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದರು.

ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ಅಂದಿನ ಬಿಹಾರದಂತೆ ರಾಜ್ಯವಾಗಿದೆ. ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಕೆಂಪಯ್ಯ ಅವರನ್ನು ಸಲಹೆಗಾರ ಹುದ್ದೆಯಿಂದ ತೆಗೆದು ಹಾಕಿ ಎಂದು ಎಲ್ಲರೂ ಕೇಳುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಅವರೇ ಕೆಂಪಯ್ಯ ಅವರ ಹಿಡಿತದಲ್ಲಿ ಇರುವಂತಿದೆ ಎಂದರು.

ತಾವೊಬ್ಬ ಮುಖ್ಯಮಂತ್ರಿ ಎಂಬುದನ್ನು ಮರೆತಿರುವ ಸಿದ್ದರಾಮಯ್ಯ ಜನರ ಪ್ರತಿಭಟನೆಯ ಹಕ್ಕನ್ನು ಕಿತ್ತುಕೊಂಡಿದ್ದಾರೆ. ಅವರಿಗಿಂತ ಗ್ರಾಮ ಪಂಚಾಯಿತಿ ಅಧ್ಯಕ್ಯರೇ ಚೆನ್ನಾಗಿ ಕೆಲಸ ಮಾಡುತ್ತಾರೆ. ಬೆದರಿಕೆಯ ತಂತ್ರ ಶೋಭೆ ತರುವುದಿಲ್ಲ. ಬಿಜೆಪಿ ಹೋರಾಟದಿಂದ ಅವರು ತತ್ತರಿಸಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT