ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳಮೀಸಲಾತಿಗಾಗಿ ಡಿಸಿಗೆ ಇಂದು ಮನವಿ ಸಲ್ಲಿಕೆ

Last Updated 8 ಸೆಪ್ಟೆಂಬರ್ 2017, 9:27 IST
ಅಕ್ಷರ ಗಾತ್ರ

ಹಿರಿಯೂರು: ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಸೆಪ್ಟೆಂಬರ್‌ 8ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದು ಆದಿಜಾಂಬವ ಬೃಹನ್ಮಠದ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.

ಸದಾಶಿವ ಆಯೋಗದ ವರದಿ ಸರ್ಕಾರದ ಕೈಸೇರಿ ಹಲವು ವರ್ಷಗಳಾದರೂ ವರದಿ ಅನುಷ್ಠಾನಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ಪಡೆದು ಕೇಂದ್ರಕ್ಕೆ ಕಳುಹಿಸದೇ ಇರುವುದು ನೋವಿನ ಸಂಗತಿ.

ಸರ್ಕಾರ ಈಚೆಗೆ ನಡೆಸಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವಿವರಗಳನ್ನು ಬಹಿರಂಗ ಪಡಿಸದೇ ಕಾಲಹರಣ ಮಾಡುತ್ತಿದ್ದು, ತಕ್ಷಣ ವರದಿ ಮತ್ತು ಸಮೀಕ್ಷೆ ಬಹಿರಂಗ ಪಡಿಸಬೇಕು ಎಂದೂ ಆಗ್ರಹಿಸಿ ಮನವಿ ಸಲ್ಲಿಸಲಾಗುವುದು. ಮಾದಿಗ ಸಮಾಜದವರು ಜಿಲ್ಲಾಧಿಕಾರಿ ಕಚೇರಿ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು ಎಂದು ಸ್ವಾಮೀಜಿ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT