ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್‌ಪಿ ಆತ್ಮಹತ್ಯೆ

Last Updated 9 ಸೆಪ್ಟೆಂಬರ್ 2017, 8:27 IST
ಅಕ್ಷರ ಗಾತ್ರ

ಮಡಿಕೇರಿ: ನಿವೃತ್ತ ಡಿವೈಎಸ್‌ಪಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಮರಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಚೆರಿಯಮನೆ ಶಶಿ (65) ಆತ್ಮಹತ್ಯೆ ಮಾಡಿಕೊಂಡವರು.

ತಮ್ಮ ಮನೆಯ ಶೌಚಾಲಯದಲ್ಲಿ ನಾಡಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆ ಲೋಕಾಯುಕ್ತದಲ್ಲಿ ಡಿವೈಎಸ್‌ಪಿ ಆಗಿದ್ದರು. ಅವರ ಪತ್ನಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು.

ಇಬ್ಬರು ಹೆಣ್ಣು ಮಕ್ಕಳನ್ನು ಈಚೆಗೆ ಮದುವೆ ಮಾಡಿಕೊಟ್ಟಿದ್ದು ಮನೆಯಲ್ಲಿ ಒಬ್ಬರೇ ವಾಸವಿದ್ದರು. ಜುಗುಪ್ಸೆಯೇ ಆತ್ಮಹತ್ಯೆಗೆ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT