ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18ರಂದು ನಗರಕ್ಕೆ ಮುಖ್ಯಮಂತ್ರಿ ಭೇಟಿ

Last Updated 9 ಸೆಪ್ಟೆಂಬರ್ 2017, 8:58 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಗರದಲ್ಲಿ ಸೆಪ್ಟೆಂಬರ್ 18ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳು ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಶಾಸಕ ಡಾ.ಕೆ.ಸುಧಾಕರ್ ಅವರ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಸುಧಾಕರ್, ‘ಸೆ.18ರಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಅವರು ತಿಮ್ಮನಹಳ್ಳಿ ಸಪಲಮ್ಮ ದೇವಸ್ಥಾನದ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ, ನಂತರ ನಂದಿಗ್ರಾಮದಲ್ಲಿ ಭೋಗನಂದೀಶ್ವರ ದೇವಾಲಯ ಜೀರ್ಣೋದ್ಧಾರ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಬಳಿಕ ಕಂದವಾರ ಕೆರೆ ಹೂಳೆತ್ತುವ ಕಾಮಗಾರಿಗೆ ಭೂಮಿ ಪೂಜೆ ನಡೆಸಲಿದ್ದಾರೆ. ಜತೆಗೆ ನಗರದಲ್ಲಿರುವ ಕೆಎಸ್‌ಆರ್‌ಟಿಸಿ ನೂತನ ಬಸ್‌ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ’ ಎಂದು ಹೇಳಿದರು.

‘ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿ ಅವರು ಸೂಲಾಲಪ್ಪನ ದಿನ್ನೆಯ ಸಮೀಪದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಈ ಎಲ್ಲ ಕಾರ್ಯಕ್ರಮಗಳಿಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎನ್.ಅನುರಾಧಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್‌ ರೆಡ್ಡಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿದ್ಧರಾಮಯ್ಯ, ಉಪವಿಭಾಗಾಧಿಕಾರಿ ಶಿವಸ್ವಾಮಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT