ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳನ್ನು ದುಡಿಸಿಕೊಂಡರೆ ಕಾನೂನು ಕ್ರಮ’

Last Updated 10 ಸೆಪ್ಟೆಂಬರ್ 2017, 6:57 IST
ಅಕ್ಷರ ಗಾತ್ರ

ಮಡಿಕೇರಿ: ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಕಂಡುಬಂದಲ್ಲಿ, ಬಾಲ ಕಾರ್ಮಿಕರ ಪೋಷಕರು ಹಾಗೂ ದುಡಿಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
‘ಶಾಲೆಗಳಿಂದ ಹೊರಗುಳಿದ ಮಕ್ಕಳನ್ನು ಗುರುತಿಸಬೇಕು. 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು ಎಂಬ ಕಾಯ್ದೆಯೇ ಇದೆ.

ಆದರೂ, ಶಾಲೆಯಿಂದ ಮಕ್ಕಳು ಹೊರಗುಳಿಯಲು ಕಾರಣವೇನು? ಈ ಬಗ್ಗೆ ನಿಖರ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಬೇಕು ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಾಕೀತು ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು 202, ಶಿಕ್ಷಣ ಇಲಾಖೆಯಿಂದ 49 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ ಎಂಬ ವರದಿ ನೀಡಿದ್ದು, ಜಿಲ್ಲಾಡಳಿತ ನಿಖರವಾದ ಮಾಹಿತಿ ಅಗತ್ಯವಿದೆ. ಕೂಡಲೇ ಮತ್ತೊಮ್ಮೆ ಸಮೀಕ್ಷೆ ನಡೆಸುವಂತೆ ಅವರು ಸೂಚನೆ ನೀಡಿದರು.

ಕಾರ್ಮಿಕ ಇಲಾಖೆಯ ಅಧಿಕಾರಿ ರಾಮಚಂದ್ರ, ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆ ಅಡಿ ಅನುದಾನ ಬಿಡುಗಡೆ ಆಗಿದ್ದು, ಈ ಸಂಬಂಧ ಬೀದಿನಾಟಕ, ನಾಮಫಲಕ ಅಳವಡಿಕೆಗೆ ಕ್ರಿಯಾ ಯೋಜನೆ ತಯಾರಿಸಿ ಅನುಷ್ಠಾನಕ್ಕೆ ತರಲಾವುದು ಎಂದು ಹೇಳಿದರು.

ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ತಾಲ್ಲೂಕು ಕಾರ್ಮಿಕ ಅಧಿಕಾರಿಗಳಾದ ಯತ್ನಟ್ಟಿ, ಮಹದೇವ ಸ್ವಾಮಿ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ದಶರಥ ಎಂ. ದಾನೋಜಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಎನ್.ಎಂ. ಜಗದೀಶ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ರೇಷ್ಮೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT