ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌ ಬೆಟ್ಟಿಂಗ್‌: 16 ಮಂದಿ ವಶಕ್ಕೆ

Last Updated 10 ಸೆಪ್ಟೆಂಬರ್ 2017, 7:12 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಗಂಗೋತ್ರಿ ಗ್ಲೇಡ್ಸ್‌ನಲ್ಲಿ ನಡೆಯುತ್ತಿರುವ ಕರ್ನಾಟಕ ಪ್ರೀಮಿಯರ್‌ ಲೀಗ್ (ಕೆಪಿಎಲ್‌) ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ಬೆಟ್ಟಿಂಗ್‌ನಲ್ಲಿ ತೊಡಗಿದ್ದ 16 ಮಂದಿಯನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.

ಬಂಧಿತರು ಹರಿಯಾಣ, ಪಂಜಾಬ್‌ ಹಾಗೂ ಉತ್ತರ ಭಾರತದ ಇತರ ರಾಜ್ಯದವರಾಗಿದ್ದು, ಬೆಟ್ಟಿಂಗ್‌ ದಂಧೆಗಾಗಿ ಮೈಸೂರಿಗೆ ಬಂದಿದ್ದರು ಎಂಬ ಸಂಗತಿ ವಿಚಾರಣೆಯಿಂದ ಬೆಳಕಿಗೆ ಬಂದಿದೆ.

ನಗರದಲ್ಲಿ ಸೆ. 4ರಿಂದ ಆರಂಭವಾಗಿದ್ದ ಟೂರ್ನಿಯಲ್ಲಿ ಬೆಟ್ಟಿಂಗ್‌ ನಡೆಯುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಶುಕ್ರವಾರ ಮಧ್ಯಾಹ್ನ ಬಿಜಾಪುರ ಬುಲ್ಸ್‌ ಹಾಗೂ ಬಳ್ಳಾರಿ ಟಸ್ಕರ್ಸ್‌ ನಡುವೆ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ನಗರ ಅಪರಾಧ ಪತ್ತೆ ದಳ (ಸಿಸಿಬಿ) ಹಾಗೂ ಜಯಲಕ್ಷ್ಮಿಪುರಂ ಠಾಣೆಯ ಪೊಲೀಸರು ದಾಳಿ ನಡೆಸಿದರು.

‘ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ಬೆಟ್ಟಿಂಗ್‌ನಲ್ಲಿ ತೊಡಗಿದ್ದ 15 ಆರೋಪಿಗಳು ಹಿಂದಿನ ಟೂರ್ನಿಯಲ್ಲಿ ಸಿಕ್ಕಿಬಿದ್ದಿದ್ದರು. ಮಫ್ತಿಯಲ್ಲಿದ್ದ ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದರು. 

ವಿಕೆಟ್‌, ಸಿಕ್ಸ್‌ರ್‌ ಹಾಗೂ ಬೌಂಡರಿ ಗಳಿಸಿದಾಗ ತಮ್ಮೊಳಗೆ ಬೆಟ್ಟಿಂಗ್‌ ಕಟ್ಟಿಕೊಳ್ಳುತ್ತಿದ್ದರು. ದಂಧೆಯ ಕಿಂಗ್‌ಪಿನ್‌ಗಳೊಂದಿಗೆ ಇರುವ ಸಂಪರ್ಕಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT