ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಯಿ ಬೈದ್ಯೆತಿ ಮೂರ್ತಿಗೆ ಅವಮಾನ: ವ್ಯಕ್ತಿಯ ಬಂಧನ

Last Updated 11 ಸೆಪ್ಟೆಂಬರ್ 2017, 9:23 IST
ಅಕ್ಷರ ಗಾತ್ರ

ಪುತ್ತೂರು: ತಾಲ್ಲೂಕಿನ ಬಡಗನ್ನೂರು ಗ್ರಾಮದ ಪಡುಮಲೆ ಔಷಧಿ ವನದಲ್ಲಿರುವ ದೇಯಿ ಬೈದ್ಯೆತಿ ಮೂರ್ತಿಗೆ ಅವಮಾನ ಮಾಡಿದ ಆರೋಪದಲ್ಲಿ ಒಬ್ಬ ಯುವಕನನ್ನು ಭಾನುವಾರ ಸಂಪ್ಯ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ತಾಲ್ಲೂಕಿನ ಈಶ್ವರಮಂಗಲ ನಿವಾಸಿ, ರಿಕ್ಷಾ ಚಾಲಕ ಹನೀಫ್(37) ಬಂಧಿತ ಆರೋಪಿ. ಈತ ಪಡುಮಲೆ ಔಷಧಿ ವನದಲ್ಲಿರುವ ಕೋಟಿ ಚೆನ್ನಯರ ತಾಯಿ ದೇಯಿ ಬೈದ್ಯೆತಿಯ ಮೂರ್ತಿಯ ಪಕ್ಕದಲ್ಲಿ ಕುಳಿತು ಮೂರ್ತಿಯ ಎದೆಯನ್ನು ಮುಟ್ಟುವಂತಹ ಅಶ್ಲೀಲ ಭಂಗಿಯ ಭಾವಚಿತ್ರ ತೆಗೆದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದ.

ಈ ಕುರಿತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಕಾರ್ಯದರ್ಶಿ ಕೇಶವ ಪೂಜಾರಿ ಬೆದ್ರಾಳ ಅವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.\

ಮಹದಾಯಿ: ಆಮರಣ ಉಪವಾಸ ಸತ್ಯಾಗ್ರಹ ಪ್ರಾರಂಭ ನವಲಗುಂದ (ಧಾರವಾಡ ಜಿಲ್ಲೆ): ಮಹದಾಯಿ ಹಾಗೂ ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ, ಏಳು ರೈತರು ಭಾನುವಾರದಿಂದ ಇಲ್ಲಿ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಸರ್ವಪಕ್ಷದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿರೋಧ ಪಕ್ಷದ ಬಿಜೆಪಿ ನಡೆದುಕೊಳ್ಳಲಿಲ್ಲ ಎಂದು ಆರೋಪಿಸಿರುವ ರೈತರು, ಪಕ್ಷಾತೀತ ಹೋರಾಟ ಸಮಿತಿ ನೇತೃತ್ವದಲ್ಲಿ ಧರಣಿಗೆ ಮುಂದಾಗಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಬಂದೋಬಸ್ತ್‌ ಒದಗಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT