ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ಪುಷ್ಕರ ಸ್ನಾನ ಇಂದಿನಿಂದ

Last Updated 12 ಸೆಪ್ಟೆಂಬರ್ 2017, 7:23 IST
ಅಕ್ಷರ ಗಾತ್ರ

ರಾಮನಾಥಪುರ (ಕೊಣನೂರು): 12 ವರ್ಷಗಳಿಗೊಮ್ಮೆ ನಡೆಯುವ ಕಾವೇರಿ ಪುಷ್ಕರ ಸ್ನಾನ ಕೈಂಕರ್ಯ ಪ್ರಸಕ್ತ ವರ್ಷ ರಾಮನಾಥಪುರದಲ್ಲಿ ನಡೆಯಲಿದ್ದು, ಸೆ. 12ರಂದು ಚಾಲನೆ ದೊರೆಯಲಿದೆ. ಸೆ. 23ರವರೆಗೆ ಸ್ನಾನಾದಿ ಕೈಂಕರ್ಯಗಳು ನಡೆಯಲಿದ್ದು, ಕಾರ್ಯಕ್ರಮಕ್ಕೆ ಪೂರ್ವಸಿದ್ಧತೆಗಳು ಪೂರ್ಣಗೊಂಡಿವೆ.

ರಾಮನಾಥಪುರದ ರಾಮೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪುಷ್ಕರ ಸ್ನಾನಾದಿ ಕೈಂಕರ್ಯಗಳ ಪೂರ್ವಸಿದ್ಧತೆಯನ್ನು ವೀಕ್ಷಿಸಿ ಮಾತನಾಡಿದ ಸಚಿವ ಎ. ಮಂಜು, ಲೋಕ ಕಲ್ಯಾಣಾರ್ಥವಾಗಿ ನಡೆಯವ ಈ ಕಾರ್ಯಕ್ರಮದ ನೇತೃತ್ವವನ್ನು ಅರೇಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠದ ಶಿವಸುಜ್ಞಾನ ತೀರ್ಥ ಸ್ವಾಮೀಜಿ, ದೊಡ್ಡಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಹಾಸನ ಆದಿಚುಚನಗಿರಿ ಮಠದ ಶಂಭುನಾಥ ಸ್ವಾಮೀಜಿ, ಚಿಲುಮೆ ಮಠದ ಜಯದೇವಸ್ವಾಮೀಜಿ, ಬಸವಾಪಟ್ಟಣ ತೋಂಟದಾರ್ಯ ಮಠದ ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ, ಕೆಸವತ್ತೂರು ಮಠದ ಬಸವರಾಜೇಂದ್ರ ಸ್ವಾಮೀಜಿ, ಶಿರದನಹಳ್ಳಿ ಸಿದ್ದಲಿಂಗ ಸ್ವಾಮೀಜಿ ವಹಿಸಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ಗುರುಪ್ರಕಾಶ್ ಗುರೂಜಿ ಮಾತನಾಡಿ, ‘ಪ್ರತಿ ದಿನ ಮುಂಜಾನೆ 4 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 7ಕ್ಕೆ ಕಾವೇರಿ ನದಿಗೆ ಪಂಚ ಆರತಿ ಕಾರ್ಯಕ್ರಮ ನಡೆಯಲಿದೆ’ ಎಂದರು.

ತಹಶೀಲ್ದಾರ್ ಪ್ರಸನ್ನಮೂರ್ತಿ, ತಾ.ಪಂ ಮಾಜಿ ಸದಸ್ಯ ಶ್ರೀನಿವಾಸಮೂರ್ತಿ, ಕೊಣನೂರು ಕೆ.ಕೆ.ಗಣೇಶ್, ಲೋಕೇಶ್, ಜಿಲ್ಲಾ ಕಾವೇರಿ ನದಿ ಸ್ವಚ್ಛತಾ ಆಂದೋಲನಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT