ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಸರಾ ವೇಳೆ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನ ನಿರ್ಬಂಧ ಸಾಧ್ಯತೆ

Last Updated 12 ಸೆಪ್ಟೆಂಬರ್ 2017, 8:32 IST
ಅಕ್ಷರ ಗಾತ್ರ

ಮೈಸೂರು: ದಸರಾ ಮಹೋತ್ಸವದಲ್ಲಿ ಚಾಮುಂಡಿಬೆಟ್ಟದಲ್ಲಿ ಉಂಟಾಗುವ ಸಂಚಾರ ದಟ್ಟಣೆ ನಿಯಂತ್ರಿಸಲು ‘ಆಷಾಢ ಶುಕ್ರವಾರ’ದ ಮಾದರಿಯಲ್ಲಿ ಖಾಸಗಿ ವಾಹನ ಪ್ರವೇಶ ನಿರ್ಬಂಧಿಸಲು ಪೊಲೀಸರು ನಿರ್ಧರಿಸಿದ್ದಾರೆ. ಈ ಸಂಬಂಧ ಕಮಿಷನರೇಟ್‌ ವ್ಯಾಪ್ತಿಯ ಪೊಲೀಸರು ಸಲ್ಲಿಸಿದ ಪ್ರಸ್ತಾವ ದಸರಾ ಮಹೋತ್ಸವ ಉನ್ನತ ಸಮಿತಿಯ ಮುಂದಿದೆ.

2016ರಲ್ಲಿ ದಸರಾ ಮಹೋತ್ಸವದಲ್ಲಿ ಮೊದಲ ಬಾರಿಗೆ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಆದರೆ, ಪೂರ್ವಸಿದ್ಧತೆಯ ಕೊರತೆಯಿಂದಾಗಿ ಇದು ಯಶಸ್ವಿಯಾಗಲಿಲ್ಲ. ಹೀಗಾಗಿ, ಈ ಬಾರಿ ನಾಡಹಬ್ಬಕ್ಕೂ ಮುನ್ನವೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಿರ್ಧರಿಸಲಾಗಿದೆ.

‘ಸೆ.21ರಿಂದ ಅ.5ರವರೆಗೆ ಬೆಟ್ಟಕ್ಕೆ ಖಾಸಗಿ ವಾಹನ ಪ್ರವೇಶ ನಿರ್ಬಂಧಿಸಲು ತೀರ್ಮಾನಿಸಲಾಗಿದೆ. ಬೆಟ್ಟಕ್ಕೆ ಬರುವ ಭಕ್ತರು ಹಾಗೂ ಪ್ರವಾಸಿಗರ ವಾಹನ ನಿಲುಗಡೆಗೆ ಲಲಿತಮಹಲ್‌ ಹೆಲಿಪ್ಯಾಡ್‌ನಲ್ಲಿ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಅಲ್ಲಿಂದ ಬೆಟ್ಟಕ್ಕೆ ಸಾರಿಗೆ ಬಸ್‌ ವ್ಯವಸ್ಥೆ ಮಾಡುವಂತೆ ಕೋರಲಾಗಿದೆ.

ಇದು ಇನ್ನೂ ಚರ್ಚೆಯ ಹಂತದಲ್ಲಿದ್ದು, ಶೀರ್ಘ ತೀರ್ಮಾನ ಕೈಗೊಳ್ಳುವಂತೆ ದಸರಾ ಮಹೋತ್ಸವ ಸಮಿತಿಗೆ ಮನವಿ ಮಾಡಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT