ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಯಲುಸೀಮೆ ನೀರಾವರಿ ಯೋಜನೆಗೆ ಹೋರಾಟ

Last Updated 12 ಸೆಪ್ಟೆಂಬರ್ 2017, 9:19 IST
ಅಕ್ಷರ ಗಾತ್ರ

ದೇವನಹಳ್ಳಿ: ಮರುಭೂಮಿಯಾಗುತ್ತಿರುವ ಬಯಲು ಸೀಮೆಗೆ ಸಮಗ್ರ ನೀರಾವರಿ ಯೋಜನೆಗಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಜಯ ಕರ್ನಾಟಕ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ದೀಪಕ್ ತಿಳಿಸಿದರು.


ಇಲ್ಲಿನ ಗುರುಭವನದಲ್ಲಿ ತಾಲ್ಲೂಕು ಜಯ ಕರ್ನಾಟಕ ಸಂಘಟನೆ ಸಮಾವೇಶ ಮತ್ತು ವಿವಿಧ ಸಂಘಟನೆ ಪದಾಧಿಕಾರಿಗಳ ಸೇರ್ಪಡೆ ಹಾಗೂ ನೂತನ ಪದಾಧಿಕಾರಿಗಳ ನೇಮಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎತ್ತಿನಹೊಳೆ ಯೋಜನೆ ಕಾಮಗಾರಿ ವಿಳಂಬವಾಗುತ್ತಿದೆ. ಕುಡಿಯುವ ನೀರು ಕೃಷಿ ಚಟುವಟಿಕೆಗೆ ಸಮಗ್ರ ನೀರಾವರಿ ಶಾಶ್ವತ ಯೋಜನೆ ಜಾರಿಗೆ ತಂದರೆ ಮಾತ್ರ ಶಾಶ್ವತ ಪರಿಹಾರ ಸಿಗಲು ಸಾಧ್ಯ ಎಂದರು.

ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ ಪರೈ ನೇತೃತ್ವದಲ್ಲಿ ಐದು ಜಿಲ್ಲೆಯ ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ದೇವನಹಳ್ಳಿಯಿಂದ ಕೋಲಾರಕ್ಕೆ ಕಾಲ್ನಡಿಗೆಯಲ್ಲಿ ಜಾಥಾ ನಡೆಸಿ ಕೋಲಾರದಲ್ಲಿ ಸಮಾವೇಶ ಮಾಡಲಿದ್ದಾರೆ. ಈ ಮೂಲಕ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದರು.

ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್ ಗೌಡ ಮಾತನಾಡಿ, ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷ ಕಳೆದರೂ ಬಯಲು ಸೀಮೆಗೆ ಶಾಶ್ವತ ನೀರಾವರಿ ಸೌಲಭ್ಯವಿಲ್ಲ. ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ವಿಫಲವಾಗಿವೆ ಎಂದು ಟೀಕಿಸಿದರು.

ನೂತನ ತಾಲ್ಲೂಕು ಅಧ್ಯಕ್ಷ ರೆಡ್ಡಿಹಳ್ಳಿ ಚೇತನ್ ಮಾತನಾಡಿ, ತಾಲ್ಲೂಕಿನಲ್ಲಿರುವ ಕಂದಾಯ ಇಲಾಖೆಯಲ್ಲಿ ಸಕಾಲದಲ್ಲಿ ಅರ್ಜಿ ಸಲ್ಲಿಸಿ ಎಂದರು.

ಜಿಲ್ಲಾ ನೂತನ ಉಪಾಧ್ಯಕ್ಷರನ್ನಾಗಿ ಎಸ್.ವಿಜಯ್ ಕುಮಾರ್, ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯರನ್ನಾಗಿ ಟಿ.ರವಿ ಅವರನ್ನು ನೇಮಕ ಮಾಡಲಾಯಿತು. ರಾಜ್ಯ ಉಪಾಧ್ಯಕ್ಷ ರಾಮ ಚಂದ್ರಪ್ಪ, ಕಾರ್ಯಕಾರಿ ಮಂಡಳಿ ಸದಸ್ಯ ಕೆ.ವೆಂಕಟೇಶ, ಜಿಲ್ಲಾ ಕಾರ್ಯಾಧ್ಯಕ್ಷ ಹೊನ್ನಪ್ಪ, ನಗರ ಘಟಕ ಅಧ್ಯಕ್ಷ ಕುಮಾರ್, ವಿಜಯಪುರ ನಗರ ಅಧ್ಯಕ್ಷ ಕೆ.ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಪ್ರಸನ್ನ, ಸಂಚಾಲಕ ಆನಂದ್, ಮುಖಂಡ ರಾಮಚಂದ್ರಪ್ಪ, ಮುನಿರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT