ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಟೋಬರ್‌ನಲ್ಲಿ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆ

Last Updated 12 ಸೆಪ್ಟೆಂಬರ್ 2017, 19:41 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರಿನಲ್ಲಿ ನವೆಂಬರ್‌ 24ರಿಂದ ಮೂರು ದಿನ ನಡೆಯಲಿರುವ ಅಖಿಲ ಭಾರತ 83ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ ಆರಂಭಿಸಲಾಗಿದ್ದು, ಅಕ್ಟೋಬರ್‌ನಲ್ಲಿ ಸಮ್ಮೇಳನಾಧ್ಯಕ್ಷರ ಆಯ್ಕೆ ಆಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ತಿಳಿಸಿದರು.

‘ಸಮ್ಮೇಳನಾಧ್ಯಕ್ಷರು ಯಾರಾಗಬೇಕು ಎಂಬ ಬಗ್ಗೆ ಇದುವರೆಗೆ ಚರ್ಚೆ ನಡೆದಿಲ್ಲ. ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದರು.

ಮೈಸೂರು ಅರಮನೆ ಮೈದಾನ, ವಸ್ತು ಪ್ರದರ್ಶನ ಮೈದಾನ ಅಥವಾ ಮಹಾರಾಜ ಕಾಲೇಜು ಮೈದಾನಗಳನ್ನು ಸಮ್ಮೇಳನಕ್ಕೆ ಗುರುತಿಸ
ಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್‌. ಸಿ. ಮಹದೇವಪ್ಪ ಅವರೊಂದಿಗೆ ಚರ್ಚಿಸಿ ಸ್ಥಳ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ಸಮ್ಮೇಳನದಲ್ಲಿ ಚರ್ಚೆ ಆಗಬೇಕಿರುವ ವಿಷಯಗಳನ್ನು ಅಂತಿಮಗೊಳಿಸಲು ಎಚ್‌.ಎಸ್‌. ವೆಂಕಟೇಶಮೂರ್ತಿ, ಕೆ.ವೈ. ನಾರಾಯಣಸ್ವಾಮಿ, ಎಂ.ಎಸ್. ಆಶಾದೇವಿ, ಕಾ.ತ. ಚಿಕ್ಕಣ್ಣ, ಮೂಡ್ನಾಕೂಡು ಚಿನ್ನಸ್ವಾಮಿ ಅವರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ ಎಂದು ಕಸಾಪ ಅಧ್ಯಕ್ಷರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT