ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣ: ‘ಎಫ್‌ಐಆರ್‌ಗೆ ತಡೆ ನೀಡಲು ಕಾನೂನಿನ ಅಡ್ಡಿಯಲ್ಲ’

Last Updated 12 ಸೆಪ್ಟೆಂಬರ್ 2017, 19:58 IST
ಅಕ್ಷರ ಗಾತ್ರ

ಬೆಂಗಳೂರು: ‘ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣಗಳು ಇನ್ನೂ ಪೊಲೀಸರ ತನಿಖೆಯ ಹಂತದಲ್ಲಿವೆ. ನ್ಯಾಯಾಲಯದ ವಿಚಾರಣೆ ಹಂತದಲ್ಲಿ ಇಲ್ಲ. ಹೀಗಾಗಿ ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿರುವ ಎಫ್‌ಐಆರ್‌ಗಳಿಗೆ ತಡೆ ನೀಡಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದರು.

ಈ ಕುರಿತ ಅರ್ಜಿಗಳನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ತಮ್ಮ ವಾದ ಮಂಡನೆಗೆ ಪೂರಕವಾದ ಸುಪ್ರೀಂಕೋರ್ಟ್‌ ತೀರ್ಪುಗಳನ್ನು ಉಲ್ಲೇಖಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ‘ಅರ್ಜಿದಾರರ ಕೋರಿಕೆ ಊರ್ಜಿತಗೊಳಿಸುವುದಕ್ಕೆ ಹೈಕೋರ್ಟ್‌ಗೆ ಅಧಿಕಾರವಿದೆ’ ಎಂದು ಪ್ರತಿಪಾದಿಸಿದರು.

‘ಯಾವುದೇ ಪ್ರಕರಣ ನ್ಯಾಯಾ ಲಯದಲ್ಲಿ ವಿಚಾರಣೆ ಹಂತದಲ್ಲಿದ್ದಾಗ ಎಫ್‌ಐಆರ್‌ಗೆ ತಡೆ ನೀಡಬಾರದು. ಆದರೆ ಈ ಪ್ರಕರಣದಲ್ಲಿ ಇನ್ನೂ ಪೊಲೀಸರು ತನಿಖೆ ನಡೆಸುತ್ತಿದ್ದು ಅರ್ಜಿದಾರರ ಅರಿಕೆಯನ್ನು ಮಾನ್ಯ ಮಾಡಬೇಕು’ ಎಂದು ಕೋರಿದರು. ವಿಚಾರಣೆ ಬುಧವಾರಕ್ಕೆ (ಸೆ.13) ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT