ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ಕಾರಿ ಆಸ್ಪತ್ರೆಗೆ ಸೌಲಭ್ಯ ಒದಗಿಸಲು ಪ್ರಯತ್ನ’

Last Updated 13 ಸೆಪ್ಟೆಂಬರ್ 2017, 9:48 IST
ಅಕ್ಷರ ಗಾತ್ರ

ನರಸಿಂಹರಾಜಪುರ: ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಅತ್ಯಾಧುನಿಕ ಸೌಲಭ್ಯ ಒದಗಿಸಲು ಪ್ರಯತ್ನಿಸಲಾಗುವುದು ಎಂದು ವಿಧಾನಪರಿಷತ್ ಮಾಜಿ ಸದಸ್ಯ ಎಂ.ಶ್ರೀನಿವಾಸ್ ತಿಳಿಸಿದರು. ಇಲ್ಲಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸರ್ಕಾರ ಬಡವರಿಗೆ ಗುಣ ಮಟ್ಟದ ಆರೋಗ್ಯ ಸೇವೆ ನೀಡಲು ಕೋಟ್ಯಾಂತರ ಅನುದಾನ ವೆಚ್ಚ ಮಾಡುತ್ತಿದೆ.ಅಪಘಾತವಾದಗ ತಕ್ಷಣ ₹25ಸಾವಿರ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡಲು ಹರೀಶ್ ಸಾಂತ್ವನ ಯೋಜನೆ ಜಾರಿಗೆ ತಂದಿದೆ ಎಂದರು. ಬರುವ ನವೆಂಬರ್ ತಿಂಗಳಿಂದ ರಾಜ್ಯದ ಪ್ರತಿಯೊಬ್ಬರಿಗೂ ಖಾಸಗಿ ಆಸ್ಪತ್ರೆಯೂ ಸೇರಿದಂತೆ ಎಲ್ಲಾ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಸೇವೆ ನೀಡುವ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ. ಜನರು ಅದರ ಸದುಪಯೋಗ ಪಡೆದು ಕೊಳ್ಳಬೇಕು ಎಂದರು.

ಇಲ್ಲಿನ ಸರ್ಕಾರಿ ಆಸ್ಪತ್ರೆ ರಾಜ್ಯದ ಉತ್ತಮ ಸೌಲಭ್ಯವಿರುವ ಸರ್ಕಾರಿ ಆಸ್ಪತ್ರೆ ಯಾಗಬೇಕು, ಎಲ್ಲಾ ಜನರಿಗೂ ಗುಣ ಮಟ್ಟದ ಆರೋಗ್ಯ ಸೇವೆ ದೊರೆಯ ಬೇಕು ಎಂಬ ಆಶಾಭಾವನೆ ಹೊಂದಿದ್ದು ಇದನ್ನು ಪೂರೈಸುವ ನಿಟ್ಟಿನಲ್ಲಿ ಸಕಲ ರೀತಿಯ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಮಾಜಿ ವಿಂಗ್ ಕಮಾಂಡರ್ ಬಾಬು,ನಾರಾಯಣ ಮೂರ್ತಿ, ವೈದ್ಯಾಧಿಕಾರಿ ಎಲ್ದೋಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT